Latest News

ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ತೊಂದರೆ ಇಲ್ಲ  :ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ: ಲಕ್ಷ್ಮಿ ಕಾಂತ ರೆಡ್ಡಿ ಜಿ

 

ಮೈಸೂರು, ಮಾ.12:- ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ  ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ  ಅವರು ತಿಳಿಸಿದರು‌.

ಅವರು ಬುಧವಾರ  ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತೈಲ ಸರಬರಾಜು ಕಂಪನಿಗಳಾದ ಎಚ್ ಪಿ.ಸಿ.ಎಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ದೊಂದಿಗೆ ಸಭೆ ನಡೆಸಿ ಅವರಿಂದ ಮಾಹಿತಿ ಪಡೆದು  ಜಿಲ್ಲೆಯಲ್ಲಿ ಗೃಹಬಳಕೆಯ ಸಿಲಿಂಡರ್ ಸರಬರಾಜಿನಲ್ಲಿ ಪ್ರಸ್ತುತ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದರು.

ಸಾರ್ವಜನಿಕರು ಗೃಹಬಳಕೆ ಅನಿಲದ ಕೊರತೆ ಉಂಟಾಗಬಹುದು ಎಂಬ ಭಯದಿಂಸದ ಮುಂಗಡವಾಗಿ ಅಡುಗೆ ಅನಿಲ ಸಿಲೆಂಡರ್ ಬುಕ್ಕಿಂಗ್ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ದಕ್ಕೆ ಇರುವುದಿಲ್ಲ ಎಂದು ಖಚಿತಪಡಿಸಿದರು.

ಜಿಲ್ಲೆಯಲ್ಲಿ ಅಡುಗೆ ಅನಿಲವನ್ನು ಅಕ್ರಮವಾಗಿ ಸಂಗ್ರಹಿಸುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ    ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಾಣಿಜ್ಯ ಅಡುಗೆ ಅನಿಲ ಬಳಕೆಗೆ ಸಂಬಂಧಿಸಿದಂತೆ  ಹೋಟೆಲ್, ರೆಸ್ಟೋರೆಂಟ್, ಕೈಗಾರಿಕೆಗಳ ಗಳಿಗೆ, ಕಲ್ಯಾಣ ಮಂಟಪಗಳಿಗೆ ಸಧ್ಯಕ್ಕೆ ಅಡುಗೆ ಅನಿಲದ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿರುತ್ತದೆ.  ಆಸ್ಪತ್ರೆಗಳು, ಶಾಲೆಗಳು, ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು ಮತ್ತು ಅಂಗನವಾಡಿಗಳು, ಅನಾಥಾಶ್ರಮಗಳು ಸೇರಿದಂತೆ ಮುಂತಾದ ಅಗತ್ಯ ಸೇವಾ ಸಂಸ್ಥೆಗಳಿಗೆ ಅಡುಗೆ ಅನಿಲದ ಕೊರತೆ ಉಂಟಾಗದಂತೆ   ಎಂದು ವಿವಿಧ ಅನಿಲ‌ ಕಂಪನಿಗಳ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಚ್ ಪಿ.ಸಿ.ಎಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ಕಂಪನಿಯ ಅಧಿಕಾರಿಗಳು ಅನಿಲ ಸಿಲೆಂಡರ್ ಸರಬರಾಜಿನಲ್ಲಿ ತೊಂದರೆಯಾದರೆ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ , ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಎಚ್ ಪಿ.ಸಿ.ಎಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ಸೇಲ್ಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Contact us for classifieds and ads : +91 9742974234