Latest News

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಮಾಜಿ ಸೈನಿಕರ ಕುಂದು ಕೊರತೆ ನಿವಾರಣಾ ಸಭೆ

ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರ ಕುಂದುಕೊರತೆ ನಿವಾರಣೆ: ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು,ಫೆ.09 :- ಜಿಲ್ಲೆಯ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದುಕೊರತೆಗಳನ್ನು ನಿವಾರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರ್ಯ ವ್ಯಾಪ್ತಿಗೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವಲಂಬಿತರ ಕುಂದು ಕೊರತೆ ಆಲಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮಾಜಿ ಸೈನಿಕರು ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಮಾನ್ಯ ಜಿಲ್ಲಾಧಿಕಾರಿಗಳು ಅಹವಾಲುಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದರು. ಇನ್ನು ಮುಂದೆಯೂ ಮಾಜಿ ಸೈನಿಕರ ಸಮಸ್ಯೆಗಳನ್ನು ಪ್ರಥಮ ಆದ್ಯತೆಯಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು. ತಮ್ಮ ಹಂತದಲ್ಲಿ ಪ್ರತಿ ತಿಂಗಳು ಮಾಜಿ ಸೈನಿಕರ ಕುಂದು ಕೊರತೆಗಳ ಸಭೆ ನಡೆಸಿ ಪರಿಹರಿಸುವಂತೆ ಈ ಸಂಬಂಧ ವರದಿ ನೀಡುವಂತೆ ಉಪ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೆಶಕರಿಗೆ ಸೂಚನೆ ನೀಡಿದರು.
ಮಾಜಿ ಸೈನಿಕರಿಗೆ ನಿವೇಶನಗಳನ್ನು ನೀಡುವ ಕುರಿತು ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆಗಳು ನಿಯಮಾನುಸಾರ ಕ್ರಮ ಕೂಗೊಳ್ಳುವಂತೆ ನಿರ್ದೇಶನ ನೀಡಿದರು.
ತಮ್ಮ ಅಹವಾಲುಗಳನ್ನು ಸಲ್ಲಿಸಿದ ನೂರಾರು ಮಾಜಿ ಸೈನಿಕರು ಸಭೆಯನ್ನು ಏರ್ಪಡಿಸಿದ್ದರಿಂದ ನಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಲು ಒಂದು ವೇದಿಕೆ ದೊರಕಿದಂತಾಗಿದೆ. ನಮ್ಮ ಹಲವಾರು ಸಮಸ್ಯೆಗಳು ಇಂದು ಪರಿಹಾರವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ ಶಿವರಾಜು, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಕ್ಷಿತ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಕುಸುಮಾ ಕುಮಾರಿ ಸೇರಿದಂತೆ ನೂರಾರು ಮಾಜಿ ಸೈನಿಕರು ಹಾಗೂ ಅವರ ಅವಲಂಬಿರ ಕುಟುಂಬದವರು ಉಪಸ್ಥಿತರಿದ್ದರು.

Contact us for classifieds and ads : +91 9742974234