ಮೈಸೂರು ಮಾರ್ಚ್ 5 :- ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಾರ್ಚ್ 5 ಹಾಗೂ ಏಪ್ರಿಲ್ 14 ರಂದು ಕ್ರಮವಾಗಿ ರಾಜ್ಯಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮದಿನಾಚರಣೆಯ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ 2026-27ನೇ ಸಾಲಗೆ ಸದರಿ ರಾಷ್ಟ್ರನಾಯಕರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, ರಾಜ್ಯ ಮಟ್ಟದ ಡಾ: ಬಾಬು ಜಗಜೀವನರಾಂ ಹಾಗೂ ರಾಜ್ಯ ಮಟ್ಟದ ಡಾ: ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.
ಜಿಲ್ಲಾ ಹಂತದಲ್ಲಿ ರಾಜ್ಯ ಮಟ್ಟದ ರಾಜ್ಯ ಪ್ರಶಸ್ತಿಯ ಬಗ್ಗೆ ಪ್ರಚಾರ ಮಾಡಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವ ಅರ್ಜಿಗಳನ್ನು ಸಂಗ್ರಹಿಸಿ, ಅರ್ಹ ವ್ಯಕ್ತಿಗಳನ್ನು ಮಾನ್ಯ ಜಿಲ್ಲಾಧಿಕಾರಿಗಳಿಂದ ಧೃಡೀಕರಿಸಿ’ ಕೇಂದ್ರ ಕಚೇರಿಗೆ ಕಳುಹಿಸಬೇಕಾಗಿರುತ್ತದೆ. ಅರ್ಹ ವ್ಯಕ್ತಿಗಳು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಕಚೇರಿ ಸಮಯದಲ್ಲಿ ಅರ್ಜಿ ನಿಗಧಿತ ಸೂಚನೆ ಹಾಗೂ ನಮೂನೆಗಳನ್ನು ಪಡೆದು ದ್ವಿ ಪ್ರತಿಯಲ್ಲಿ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿಯೇ ಸೂಕ್ತ ದಾಖಲೆಗಳೊಂದಿಗೆ ಮಾರ್ಚ್ 07 ರೊಳಗೆ ಸಲ್ಲಿಸಬೇಕು. ಅರ್ಹ ವ್ಯಕ್ತಿಗಳು ಸದರಿ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ



