
ದೆಹಲಿ :- ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹಾಗೂ ಕೇಂದ್ರ ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ, ತಂಬಾಕು ಖರೀದಿ, ವಿದೇಶ ಮಾರುಕಟ್ಟೆಗಳಿಗೆ ರಫ್ತು,ತಂಬಾಕು ಬೆಳೆಗಾರರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಹಾಗೂ ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಬೆಳೆಗಾರರ ಬೇಡಿಕೆಗಳ ವಿಷಯವಾಗಿ ಸುದೀರ್ಘವಾಗಿ ಚರ್ಚಿಸಲಾಯಿತು.

ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಶಮನಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಮ್ಮ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರ ಜತೆ ಮಾತನಾಡಿ ಬೆಳೆಗಾರರ ನೆರವಿಗೆ ಬರುವಂತೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಮಲ್ಲೇಶ್ ಬಾಬು ಶಾಸಕರಾದ ಎ.ಮಂಜು ಅವರು, ಶ್ರೀ ಜಿ.ಡಿ.ಹರೀಶ್ ಗೌಡ ಅವರು, ಶ್ರೀ ಸಿ.ಎನ್.ಮಂಜೇಗೌಡ ಅವರು, ಮಾಜಿ ಶಾಸಕರಾದ ಶ್ರೀ ಮಹದೇವು ಅವರು, ಶ್ರೀ ಅಶ್ವಿನ್ ಕುಮಾರ್ ಅವರು, ಜೆಡಿಎಸ್ ಹಿರಿಯ ಮುಖಂಡರಾದ ಶ್ರೀ ಕೃಷ್ಣನಾಯಕ ಅವರು ಹಾಗೂ ವಾಣಿಜ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.


