Latest News

ತಂಬಾಕು ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರದ ಗಮನ ಸೆಳೆದ ದೇವೇಗೌಡ–ಕುಮಾರಸ್ವಾಮಿ

ವಿಶೇಷ ವರದಿ :-ವಡ್ಡರಕೊಪ್ಪಲು ಶಿವರಾಮು.

ಕೆ ಆರ್.ನಗರ. ಮಾ.13:-ರೈತರ  ಸಂಕಷ್ಟಕ್ಕೆ ಧಾವಿಸಿದ ಜೆಡಿಎಸ್ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮತ್ತು ಕೇಂದ್ರ ಸಚಿವರು ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೇಂದ್ರ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ  ಸಚಿವರಾದ ಪಿಯೂಷ್  ಗೋಯಲ್ ರವರನ್ನು ಭೇಟಿ ಮಾಡಿ ರಾಜ್ಯದ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.

ಜೆಡಿಎಸ್ ಪಕ್ಷದ ವರಿಷ್ಠರ ಮನವಿಗೆ ಸ್ಪಂದಿಸಿದ ಕೇಂದ್ರದ ತಂಬಾಕು ಸಚಿವರು ಶೀಘ್ರವಾಗಿ ತಂಬಾಕು ಬೆಲೆಯನ್ನು ಏರಿಸುವ ಜೊತೆಗೆ ಸೂಕ್ತ ಪರಿಹಾರವನ್ನು ನೀಡುವ ಭರವಸೆಯನ್ನು ನೀಡಿದರು ಎಂದು ನಮ್ಮ ಪತ್ರಿಕೆಗೆ ಮಾಜಿ ಸಚಿವರಾದ ಸಾರಾ ಮಹೇಶ್ ತಿಳಿಸಿದರು.

ತ0ಬಾಕು ಬೆಳೆಗಾರರ ಸಂಕಷ್ಟಕ್ಕೆ ಶೀಘ್ರವೇ ಪರಿಹಾರ :- ಕೇಂದ್ರ ಸಚಿವ ಪಿಯೂಷ್ ಗೋಯಲ್ ಭರವಸೆ

ಮಾರುಕಟ್ಟೆಯಲ್ಲಿ ತಂಬಾಕು ಬೆಲೆ ಕುಸಿತದಿಂದ ಕಂಗಾಲಾಗಿರುವ ಕರ್ನಾಟಕದ ರೈತರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭರವಸೆ ನೀಡಿದ್ದಾರೆ.

​ಶುಕ್ರವಾರ ನವದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗವು ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ, ತಂಬಾಕು ಬೆಳೆಗಾರರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು.

​ಬೆಲೆ ಕುಸಿತದಿಂದ ಕಂಗಾಲಾದ ರೈತರು

​ಕರ್ನಾಟಕದ ಮೈಸೂರು, ಹಾಸನ ಸೇರಿದಂತೆ ವಿವಿಧ ಭಾಗಗಳಲ್ಲಿ ತಂಬಾಕು ಬೆಲೆ ಗಣನೀಯವಾಗಿ ಕುಸಿದಿರುವುದನ್ನು ನಿಯೋಗವು ಸಚಿವರ ಗಮನಕ್ಕೆ ತಂದಿತು. “ರೈತರು ಬೆಳೆ ಬೆಳೆಯಲು ಹಾಕಿರುವ ವೆಚ್ಚವೂ ಕೈಗೆ ಬರದಂತಾಗಿದೆ. ಇದರಿಂದ ಸಾವಿರಾರು ರೈತ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಮಾರುಕಟ್ಟೆಯಲ್ಲಿ ಏಕಸ್ವಾಮ್ಯ ಹಾಗೂ ದರ ತಾರತಮ್ಯವನ್ನು ತಡೆಗಟ್ಟಿ, ರೈತರಿಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡುವುದು ತುರ್ತು ಅಗತ್ಯವಾಗಿದೆ” ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ವಿವರಿಸಿದರು.

​ಮನವಿಯ ಪ್ರಮುಖ ಅಂಶಗಳು:

​ತಂಬಾಕು ಬೆಳೆಗಾರರಿಗೆ ಮಾರುಕಟ್ಟೆಯಲ್ಲಿ ಸಮರ್ಪಕ ಬೆಲೆ ದೊರಕಿಸಿಕೊಡಬೇಕು.

​ವೆಚ್ಚಕ್ಕೆ ಅನುಗುಣವಾಗಿ ಲಾಭದಾಯಕ ಬೆಲೆ ನಿಗದಿಪಡಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು.

​ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ಆರ್ಥಿಕ ನೆರವು ಮತ್ತು ರಕ್ಷಣೆ ನೀಡಬೇಕು.

​ಸಚಿವರ ಸಕಾರಾತ್ಮಕ ಸ್ಪಂದನೆ

​ರೈತರ ಅಹವಾಲುಗಳನ್ನು ಆಲಿಸಿದ ಸಚಿವ ಪಿಯೂಷ್ ಗೋಯಲ್ ಅವರು, ತಂಬಾಕು ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಬೆಲೆ ಕುಸಿತಕ್ಕೆ ಕಾರಣವಾಗಿರುವ ಅಂಶಗಳನ್ನು ಪರಿಶೀಲಿಸಿ, ರೈತರಿಗೆ ಅನ್ಯಾಯವಾಗದಂತೆ ತಂಬಾಕು ಮಂಡಳಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭೆಯ ನಂತರ ಕರ್ನಾಟಕದ ನಿಯೋಗದ ಜೊತೆ ಮಾತನಾಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ರೈತರ ಸಮಸ್ಯೆಗೆ ಸ್ಪಂದಿಸುವ ಜವಾಬ್ದಾರಿ ನನ್ನದಾಗಿದ್ದು ತಂಬಾಕು ಸೇರಿದಂತೆ ಇತರ ರೈತರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವ ಜವಾಬ್ದಾರಿ ನನ್ನ ಮೇಲಿದ್ದು ಸಂಬಂಧಪಟ್ಟ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ಬಗೆಹರಿಸುವ ಭರವಸೆಯನ್ನು ನೀಡಿದರು ಎಂದು ಮಾಜಿ ಸಚಿವಾ ಸಾರಾ ಮಹೇಶ್ ತಿಳಿಸಿದರು.

​ಈ ನಿಯೋಗದಲ್ಲಿ ಕೊಡಗು-ಮೈಸೂರು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವರಾದ ಸಾ ರಾ ಮಹೇಶ್, ಕೋಲಾರ ಸಂಸದರಾದ ಕೆ. ಮಲ್ಲೇಶ್ ಬಾಬು, ಹುಣಸೂರು ಶಾಸಕರಾದ ಜಿ.ಡಿ. ಹರೀಶ್ ಗೌಡರು ಅರಕಲಗೂಡು ಶಾಸಕರಾದ ಮಂಜಣ್ಣ ವಿಧಾನಪರಿಷತ್ ಸದಸ್ಯರಾದ ಸಿಎನ್ ಮಂಜೇಗೌಡರು ಮಾಜಿ ಶಾಸಕರಾದ ಟಿ ನರಸೀಪುರದ ಅಶ್ವಿನ್ ಕುಮಾರ್ ಪಿರಿಯಾಪಟ್ಟಣದ ಮಹಾದೇವ್ ಎಚ್ ಡಿ ಕೋಟೆಯ ಜೆಡಿಎಸ್ ನಾಯಕರದ ಕೃಷ್ಣ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೇಂದ್ರದ ತಂಬಾಕು ಸಚಿವರಾದ ರವರನ್ನು ಪಿಯೂಷ್ ಗೋಯಲ್ ರವರನ್ನು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಕೇಂದ್ರ ಸಚಿವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕರ್ನಾಟಕದ ತಂಡ ತಂಬಾಕು ರೈತರ ಬಗ್ಗೆ ಚರ್ಚಿಸಿದರು.

Contact us for classifieds and ads : +91 9742974234