
ಮೈಸೂರು:- ಮೈಸೂರು ನಗರ ಪೊಲೀಸ್ ಇಲಾಖೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳನ್ನು ಭೇದಿಸಿ ಮಹತ್ವದ ಸಾಧನೆ ಮಾಡಿದ್ದು, ಒಟ್ಟು 105 ಪ್ರಕರಣಗಳನ್ನು ಪತ್ತೆಹಚ್ಚಿ ಸುಮಾರು ₹2,96,36,000 ಮೌಲ್ಯದ ನಗದು ಮತ್ತು ಚಿನ್ನಾಭರಣ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಕುರಿತು ಮೈಸೂರು ನಗರ ಪೊಲೀಸರು ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು, ಸರಗಳ್ಳತನ, ವಾಹನ ಕಳವು ಹಾಗೂ ಇತರ ಕಳವು ಪ್ರಕರಣಗಳ ಸಂಬಂಧ ಒಟ್ಟು 57 ಆರೋಪಿಗಳನ್ನು ಬಂಧಿಸಲಾಗಿದ್ದು, ಇವರಿಂದ ₹2,96,36,000 ಮೌಲ್ಯದ 2 ಕೆಜಿ 54 ಗ್ರಾಂ ಚಿನ್ನಾಭರಣ, 5 ಕೆಜಿ 312 ಗ್ರಾಂ ಬೆಳ್ಳಿ ಪದರ್ಥಗಳು, 57 ವಾಹನಗಳು ಮತ್ತು ₹10,03,000 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಇದಲ್ಲದೆ 2026ನೇ ಸಾಲಿನಲ್ಲಿ 22 ಎನ್ಡಿಪಿಎಸ್ (ಮಾದಕ ವಸ್ತು) ಪ್ರಕರಣಗಳನ್ನು ಪತ್ತೆಹಚ್ಚಿ 30 ಕೆಜಿ 255 ಗ್ರಾಂ ಗಾಂಜಾ ಹಾಗೂ 311 ಗ್ರಾಂ 579 ಮಿಲಿಗ್ರಾಂ ಸಿಂಥೆಟಿಕ್ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯ ವಿಶೇಷ ಕರ್ಯಾಚರಣೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಗಳಿಂದ ಕಳವು ಮಾಡಲಾದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ವಾಹನಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಹಿಂತಿರುಗಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಮುಖ ಪ್ರಕರಣಗಳಲ್ಲಿ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಆರೋಪಿಗಳನ್ನು ಬಂಧಿಸಿ ಒಂಬತ್ತು ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ಸುಮಾರು ₹80.50 ಲಕ್ಷ ಮೌಲ್ಯದ 529 ಗ್ರಾಂ ಚಿನ್ನಾಭರಣ, 1 ಕೆಜಿ 412 ಗ್ರಾಂ ಬೆಳ್ಳಿ ಪದರ್ಥ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಕುಮಾರಸ್ವಾಮಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಆರೋಪಿಗಳನ್ನು ಬಂಧಿಸಿ 13 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ಸುಮಾರು ₹63 ಲಕ್ಷ ಮೌಲ್ಯದ 750 ಗ್ರಾಂ ಚಿನ್ನಾಭರಣ, 960 ಗ್ರಾಂ ಬೆಳ್ಳಿ ಪದರ್ಥ ಹಾಗೂ ₹9.40 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಲಕ್ಷ್ಮೀಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರು ಆರೋಪಿಗಳನ್ನು ಬಂಧಿಸಿ ನಾಲ್ಕು ಪ್ರಕರಣಗಳನ್ನು ಪತ್ತೆಹಚ್ಚಿ ಸುಮಾರು ₹45 ಲಕ್ಷ ಮೌಲ್ಯದ ಮೂರು ಮನೆ ಕಳವು ಪ್ರಕರಣಗಳ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 324 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು ಸೇರಿವೆ.
ಸಿಸಿಬಿ ಪೊಲೀಸರ ಕರ್ಯಾಚರಣೆಯಲ್ಲಿ ಏಳು ಆರೋಪಿಗಳನ್ನು ಬಂಧಿಸಿ 11 ವಾಹನ ಕಳವು ಪ್ರಕರಣಗಳನ್ನು ಪತ್ತೆಹಚ್ಚಿ ಸುಮಾರು ₹35 ಲಕ್ಷ ಮೌಲ್ಯದ ಎರಡು ಕಾರುಗಳು, ಒಂದು ಫರ್ಸ್ ಜೀಪ್ ಹಾಗೂ ಎಂಟು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿದ್ಯಾರಣ್ಯಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ಒಂದು ಸರಗಳ್ಳತನ ಪ್ರಕರಣವನ್ನು ಪತ್ತೆಹಚ್ಚಿ ಸುಮಾರು ₹25.08 ಲಕ್ಷ ಮೌಲ್ಯದ 252 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತರ ಮರ್ಗರ್ಶನದಲ್ಲಿ ನಗರದಲ್ಲಿ ಅಪರಾಧ ನಿಯಂತ್ರಣಕ್ಕೆ ವಿಶೇಷ ಕರ್ಯಾಚರಣೆ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಸಹ ಅಪರಾಧ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೈಸೂರು ನಗರದಲ್ಲಿ ನಡೆದ ಕಳವು ಪ್ರಕರಣಗಳನ್ನು ಶೀಘ್ರ ಪತ್ತೆಹಚ್ಚಿರುವುದು ಸರ್ವಜನಿಕರಲ್ಲಿ ವಿಶ್ವಾಸ ಹೆಚ್ಚಿಸಿದ್ದು, ಅಪರಾಧ ನಿಯಂತ್ರಣದಲ್ಲಿ ಮೈಸೂರು ನಗರ ಪೊಲೀಸ್ ಇಲಾಖೆ ಉತ್ತಮ ಸಾಧನೆ ಮಾಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


