Latest News

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಬೇಕು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು -ಎನ್. ಚಲುವರಾಯಸ್ವಾಮಿ

ಮಂಡ್ಯ:-  ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ರವರು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ (ರಿ)ಬೆಂಗಳೂರು ಕಂದಾಯ ನೌಕರರ ಸಂಘದ ಭವನ ಕಟ್ಟಡ ಹಾಗೂ ಜಿಲ್ಲಾ ಕಂದಾಯ ಇಲಾಖೆ ನೌಕರರ ಮತ್ತು ನಿವೃತ್ತ ನೌಕರರ ಗೃಹ ನಿರ್ಮಾಣ ಕಚೇರಿನ್ನು ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.

ಕಂದಾಯ ನೌಕರರ ಸಂಘದ ನಿವೃತ್ತ ನೌಕರರ ಗೃಹ ನಿರ್ಮಾಣ ಕಟ್ಟಡ ಬೃಹತ್ ಕಟ್ಟಡವಾಗಿ ನಿರ್ಮಾಣ ವಾಗಿದ್ದು, ಕಂದಾಯ ಇಲಾಖೆ ನೌಕರರ ಸಮಸ್ಯೆಯನ್ನು ಬಗೆಹರಿಸಲು ಬೃಹತ್ ಕಟ್ಟಡ ನಿರ್ಮಾಣ ಆಗಿದ್ದು ನೌಕರರು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು

ಕಂದಾಯ ಇಲಾಖೆಯ ನೌಕರರಿಗೆ ಮತ್ತು ನಿವೃತ್ತ ನೌಕರರಿಗೆ ಹಾರೈಸಿದರು. ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವಾನಂದಮೂರ್ತಿ ಮಾತನಾಡಿ ನೌಕರರ ಪರಿಶ್ರಮ ದಿಂದ ಈ ಕಟ್ಟಡ ನಿರ್ಮಾಣ ವಾಗಿದೆ. ನಿವೃತ್ತಿ ಹೊಂದಿರುವ ನೌಕರರ ಸಮಸ್ಯೆ ಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಟ್ಟಡ ಮಾಡಲಾಗಿದೆ ಎಂದು ತಿಳಿಸಿದರು

ಜಿಲ್ಲೆಯಲ್ಲಿ ಎಲ್ಲಾ ಕಂದಾಯ ಇಲಾಖೆಯ ನೌಕರರು ನಿಷ್ಠೆಯಿಂದ ಕೆಲಸ ಮಾಡಬೇಕು ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿರವರು ದಿವ್ಯ ಸಾನಿಧ್ಯ ವಹಿಸಿದ್ದರು. ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಕರ್ನಾಟಕ ರಾಜ್ಯ ಸಹಕಾರಿ ಕಂದಾಯ ಇಲಾಖೆ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಡಿ. ತಮ್ಮಣ್ಣ ಗೌಡ ಉಪಸ್ಥಿತರಿದ್ದರು.

Contact us for classifieds and ads : +91 9742974234