Latest News

ಕರ್ನಾಟಕ ಜಾಹೀರಾತು ನೀತಿ ಪರಿಶೀಲನೆ: ಸಿಎಂ ಭರವಸೆ: ಸಿ.ಎಂ ಸಿದ್ದರಾಮಯ್ಯ

ದಾವಣಗೆರೆ:-ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,
ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

Contact us for classifieds and ads : +91 9742974234