ಶ್ರೀರಾಮನವಮಿ ಪ್ರಯುಕ್ತ ಮಾ.27ರಂದು ಮೈಸೂರು ನಗರದಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ
ಮೈಸೂರು, ಮಾ.24: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾರ್ಚ್ 27ರಂದು ಶ್ರೀ ರಾಮನವಮಿ ಅಂಗವಾಗಿ ಎಲ್ಲಾ ವಿಧದ ಮಾಂಸ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಮೈಸೂರು ನಗರದ ಧಾರ್ಮಿಕ ಸಂವೇದನೆ ಮತ್ತು ಸಾರ್ವಜನಿಕ ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ಮಹಾ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಆದೇಶದ ಪ್ರಕಾರ, ಪಾಲಿಕೆಗೆ ವ್ಯಾಪ್ತಿಗೆ ಸೇರಿದ ಕುರಿ ಮತ್ತು ಮೇಕೆಗಳ ಕಸಾಯಿ...






