ಮೈಸೂರು ತಾಲ್ಲೂಕು ಕಚೇರಿಗೆ ಪ್ರಾದೇಶಿಕ ಆಯುಕ್ತರ ಭೇಟಿ: ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ
ಮೈಸೂರು, ಮಾ.11:- ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ಮೈಸೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ವಿವಿಧ ರಾಜಸ್ವ ಹಾಗೂ ಆಡಳಿತಾತ್ಮಕ ಕಾರ್ಯಗಳ ಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಕಚೇರಿಯ ವಿವಿಧ ವಿಭಾಗಗಳನ್ನು ವೀಕ್ಷಿಸಿದ ಅವರು ದಾಖಲೆಗಳ ನಿರ್ವಹಣೆ, ಸಾರ್ವಜನಿಕ ಸೇವೆಗಳ ಒದಗಿಕೆ ಹಾಗೂ ಆನ್‌ಲೈನ್ ವ್ಯವಸ್ಥೆಗಳ ಕಾರ್ಯಾಚರಣೆ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು. ಪರಿಶೀಲನೆಯ ಬಳಿಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಭೆ...






