Latest News

ಮಾಧ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಅಪಾರ ಅವಕಾಶಗಳು, ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು: ಕಾರ್ಯಗಾರದಲ್ಲಿ ತಜ್ಞರ ಅಭಿಪ್ರಾಯ

ಮೈಸೂರು:-  ಮಾಧ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಇಂದು ಅನೇಕ ಅವಕಾಶಗಳು ದೊರೆಯುತ್ತಿವೆ. ಆದರೆ ಅದೇ ಸಮಯದಲ್ಲಿ ವಿವಿಧ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ. ಆ ಸವಾಲುಗಳನ್ನು ಆತ್ಮವಿಶ್ವಾಸ ಮತ್ತು ಪರಿಶ್ರಮದೊಂದಿಗೆ ಎದುರಿಸಿದರೆ ಮಹಿಳೆಯರು ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವೆಂದು ತಜ್ಞರು ಅಭಿಪ್ರಾಯಪಟ್ಟರು. “ಮಾಧ್ಯಮದಲ್ಲಿ ಮಹಿಳೆಗಿರುವ ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೂಸಾ 2.0 (RUSA 2.0) ಇವರ ಸಹಯೋಗದಲ್ಲಿ ಎರಡು...
Latest News

ಸೆಸ್ಕ್ ಪ್ರಧಾನ ಕಚೇರಿಯ ನಾಲ್ಕನೇ ಮಹಡಿ ಕಾರ್ಯಾಲಯ ಉದ್ಘಾಟನೆ

ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರಿಂದ ಲೋಕಾರ್ಪಣೆ ಮೈಸೂರು, ಮಾ.5, 2026: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)ದ ಪ್ರಧಾನ ಕಚೇರಿಯಲ್ಲಿ ನಿರ್ಮಿಸಿರುವ ನಾಲ್ಕನೇ ಮಹಡಿ ಕಚೇರಿಯ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು. ವಿಜಯನಗರದ ಎರಡನೇ ಹಂತದಲ್ಲಿರುವ ನಿಗಮ ಕಾರ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಚಾವಿಸನಿನಿ ಅಧ್ಯಕ್ಷರು ಹಾಗೂ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರು ಹಾಗೂ ಚಾವಿಸನಿನಿ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಅವರು, ನೂತನ ಕಚೇರಿ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ...
Latest News

ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ ರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮೈಸೂರು ಮಾರ್ಚ್ 5 :- ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಾರ್ಚ್ 5 ಹಾಗೂ ಏಪ್ರಿಲ್ 14 ರಂದು ಕ್ರಮವಾಗಿ ರಾಜ್ಯಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ರವರ ಜನ್ಮದಿನಾಚರಣೆಯ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ 2026-27ನೇ ಸಾಲಗೆ ಸದರಿ ರಾಷ್ಟ್ರನಾಯಕರ ಜನ್ಮದಿನಾಚರಣೆಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, ರಾಜ್ಯ ಮಟ್ಟದ ಡಾ: ಬಾಬು...
Latest News

ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಐದನೇ ಬಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ

ಮೈಸೂರು, ಮಾ.05: ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಿರಿಯ ವಕೀಲ ಶಂಭುಗೌಡ ಅವರು ಐದನೇ ಬಾರಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸೋಮನಾಯಕ.ಬಿ ಅವರು ಆಯ್ಕೆಯಾಗಿದ್ದಾರೆ. ಗುರುವಾರ ಮೈಸೂರಿನ ಸಂಘದ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆದಿದ್ದು, ಸಂಘದ ಸದಸ್ಯರು ಹಾಗೂ ನಿರ್ದೇಶಕರುಗಳ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತು. ಚುನಾವಣಾ ಪ್ರಕ್ರಿಯೆಯನ್ನು ಮೈಸೂರು ಸರ್ಕಾರಿ ಸಹಕಾರಿಗಳ ಮುಖ್ಯ ಚುನಾವಣಾಧಿಕಾರಿ ಮಂಜು ಅವರು ನಡೆಸಿಕೊಟ್ಟರು....
Latest News

ಬಿಸಿಲಿನ ತಾಪ ಹೆಚ್ಚಳ: ಕುಡಿಯುವ ನೀರು, ಮೇವು ಕೊರತೆ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ – ಶಾಸಕ ಡಿ.ರವಿಶಂಕರ್

ವರದಿ :-ವಡ್ಡರಕೊಪ್ಪಲು ಶಿವರಾಮು.  ಕೆ.ಆರ್.ನಗರ. ಮಾ. 05:- ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಮತ್ತು ಕುಡಿಯುವ ನೀರಿಗೆ ಅಭಾವ ಉಂಟಾಗುವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ರೈತರ ಕೃಷಿ ಪಂಪಸಟ್ಟು ಗಳಿಗೆ ವಿದ್ಯುತ್ ತೊಂದರೆಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಸಕ ಡಿ ರವಿಶಂಕರ್ ಸಲಹೆ ನೀಡಿದರು. ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಸಾಲಿಗ್ರಾಮ...
Latest News

ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆ ಅಡಿಯಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ – ಜಿ. ಲಕ್ಷ್ಮೀಕಾಂತ ರೆಡ್ಡಿ

ಮೈಸೂರು, ಮಾ.04:- ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆಯಡಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯುವಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಾಗೂ ಮೈಸೂರು ಮಹಾನಗರ...
Latest News

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಅಡಿ ಪತ್ರಕರ್ತೆಯರಿಗಾಗಿ  ತರಬೇತಿಗೆ ಅರ್ಜಿ ಆಹ್ವಾನ

  ಬೆಂಗಳೂರು, ಮಾರ್ಚ್ 4: – ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಮಾರ್ಚ್‌ 25 ರಿಂದ 27ರ ವರೆಗೆ ಮೈಸೂರಿನ ಇನ್‌ಫೋಸಿಸ್‌ ಕ್ಯಾಂಪಸ್‌ನಲ್ಲಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಬಹುದು. ಆಸಕ್ತ ಪತ್ರಕರ್ತೆಯರು...
Latest News

ರಸ್ತೆ ಮತ್ತು ಬಾಕ್ಸ್ ಡ್ರೈನ್ ಕಾಮಗಾರಿಗೆ ಕೃಷ್ಣರಾಜ  ಶಾಸಕ ಟಿ.ಎಸ್. ಶ್ರೀವತ್ಸರವರಿಂದ ಗುದ್ದಲಿಪೂಜೆ

ಮೈಸೂರು: ನಗರದ ಕೆ.ಆರ್ ಕ್ಷೇತ್ರದ ವಾರ್ಡ್ ನಂಬರ್ 59ರಲ್ಲಿ ರಸ್ತೆ ಹಾಗೂ ಬಾಕ್ಸ್ ಡ್ರೈನ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಅವರು ಇಂದು ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಶ್ರೀರಾಂಪುರ ಎಲ್‌ಐಜಿ ಮನೆಗಳ ಮುಂಭಾಗ ಹಾಗೂ 807 ಹುಡ್ಕೋ ಬಡಾವಣೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹತ್ತಿರ ಈ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 72 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಯೋಜನೆಯಡಿ ಹೊಸ ರಸ್ತೆ ನಿರ್ಮಾಣ...
Latest News

ಮಾ.6 ರಂದು ವಿಕಲಚೇತನರು ಹಾಗೂ ಮಹಿಳೆಯರಿಗೆ ಆರ್ಥಿಕ ಮಟ್ಟ ಸುಧಾರಿಸಲು ಕಾರ್ಯಾಗಾರ: ನಿತೇಶ್ ಪಾಟೀಲ್

ಮೈಸೂರು, ಮಾ.4:- ಮೈಸೂರು ಮಹಾನಗರ ಪಾಲಿಕೆ ವತಿಯಿಂದ  ಮಹಿಳೆಯರು ಹಾಗೂ ವಿಕಲಚೇತನರಿಗೆ ಉದ್ಯೋಗ ಕಲ್ಪಿಸಿ ಆರ್ಥಿಕ‌ ಮಟ್ಟ ಸುಧಾರಿಸಲು  ಮಾಚ್೯ 6 ರಂದು ಬೆಳಿಗ್ಗೆ 9.30 ಗಂಟೆಗೆ ಶ್ರೀ ರಂಗಚಾರ್ಲು ಪುರಭವನದಲ್ಲಿ ವಿಕಾಸ ಪಥದಲ್ಲಿ ವಿಶೇಷಚೇತನರ ಹಾಗೂ ಮಹಿಳೆಯರ ಹೆಜ್ಜೆ ಸೌರ ಬೆಂಬಲಿತ ಕಾರ್ಯಾಗಾರ ಹಾಗೂ ಜೀವನೋಪಯ ಪರಿಹಾರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ತಿಳಿಸಿದರು. ಅವರು ಇಂದು ಮೈಸೂರು ಮಹಾನಗರ ಪಾಲಿಕೆಯ...
Latest News

ವರುಣಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವುಗೊಳಿಸಿ ಅಭಿವೃದ್ಧಿ : ಡಾ|| ಯತೀಂದ್ರ ಸಿದ್ದರಾಮಯ್ಯ

ಮೈಸೂರು ಮಾ4 : ವರುಣಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಿ ಸಣ್ಣನೀರಾವರಿ ಇಲಾಖೆಯಿಂದ ಅಭಿವೃದ್ಧಿಗೊಳಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ|| ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣಾ ಕ್ಷೇತ್ರದ ತಾಯೂರು ಪಂಚಾಯಿತಿ ವ್ಯಾಪ್ತಿಯ ಗೆಜ್ಜಗನಹಳ್ಳಿ, ಹಾರೋಪುರ, ಸಾಲುಂಡಿ ಇಗ್ಲಿ ತಾಯೂರು ಗ್ರಾಮಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಗೆಜ್ಜಗನಹಳ್ಳಿಯಲ್ಲಿ ಬಸ್ ನಿಲುಗಡೆ ಕೇಳಿದ್ದೀರಿ, ನಾಲೆಗಳ ಅಭಿವೃದ್ಧಿಪಡಿಸಲು ತಿಳಿಸಿದ್ದೀರಿ, ಚರಂಡಿ ಸ್ವಚ್ಛಗೊಳಿಸಬೇಕು, ಮಕ್ಕಳಿಗೆ ಕೆಲಸ ಕೊಡಿಸಿ ಎಂದಿದ್ದೀರಿ ಅದೇ ರೀತಿ ಹಾರೋಪುರ...
1 11 12 13 14 15 52
Page 13 of 52