ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ
ಮೈಸೂರು: ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟಕ್ಕೆ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ದೀಪ ಬೆಳಗುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ವರ್ಷದ...



