ಸರ್ಕಾರಿ ಶಾಲೆ ಉಳಿವಿಗಾಗಿ ಮೈಸೂರು ಜಿಲ್ಲಾ ಮಟ್ಟದ ಪ್ರತಿಭಟನಾ ಸಮಾವೇಶ – ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರುದ್ಧ ಬುಗಿಲೆದ್ದ ಜನತೆಯ ಆಕ್ರೋಶ
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಮೈಸೂರಿನಾದ್ಯಂತ 1,666 ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ AIDSO ವಿದ್ಯಾರ್ಥಿ ಸಂಘಟನೆಯ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಲಾಗಿತ್ತು. ಮೈಸೂರಿನ 300 ಕ್ಕೂ ಹೆಚ್ಚು ಪೋಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಸಮಾವೇಶದಲ್ಲಿ AIDSO ರಾಜ್ಯ ಉಪಾಧ್ಯಕ್ಷರಾದ ಚಂದ್ರಕಲಾ ಅವರು ಮಾತನಾಡಿ’ ಜ್ಯೋತಿರಾವ್ ಫುಲೆ, ಸಾವಿತ್ರಿಬಾಯಿ ಫುಲೆ ತಮ್ಮ ಜೀವನವನ್ನೇ ಶಾಲೆಗಳಿಗಾಗಿ ಅರ್ಪಿಸಿದರು....






