Latest News

ಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ ನೀಡಿ, ಡಿಸೆಂಬರ್‌ 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ ನೀಡಿ, ಡಿಸೆಂಬರ್‌ 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹ

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಂಸದ ಯದುವೀರ್‌ ಒಡೆಯರ್‌ ಮೈಸೂರು, ಮಾ. 12: ಜಲ ಜೀವನ್ ಮಿಷನ್ (JJM) 2.0 ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವಲಯದಲ್ಲಿ ಸುಧಾರಣೆಗಳ ಮೇಲೆ ಗಮನಹರಿಸಿ, ಯೋಜನೆಯ ವೆಚ್ಚವನ್ನು ಹೆಚ್ಚಿಸುವ ಮೂಲಕ ಮತ್ತು ಅನುಷ್ಠಾನವನ್ನು ಮರು ರಚಿಸುವ ಮೂಲಕ ಜಲ ಜೀವನ್ ಮಿಷನ್ ಅವಧಿಯನ್ನು ಡಿಸೆಂಬರ್ 2028 ರವರೆಗೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ...
Latest News

ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ತೊಂದರೆ ಇಲ್ಲ  :ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ: ಲಕ್ಷ್ಮಿ ಕಾಂತ ರೆಡ್ಡಿ ಜಿ

  ಮೈಸೂರು, ಮಾ.12:- ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ  ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ  ಅವರು ತಿಳಿಸಿದರು‌. ಅವರು ಬುಧವಾರ  ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತೈಲ ಸರಬರಾಜು ಕಂಪನಿಗಳಾದ ಎಚ್ ಪಿ.ಸಿ.ಎಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ದೊಂದಿಗೆ ಸಭೆ ನಡೆಸಿ ಅವರಿಂದ ಮಾಹಿತಿ ಪಡೆದು  ಜಿಲ್ಲೆಯಲ್ಲಿ ಗೃಹಬಳಕೆಯ ಸಿಲಿಂಡರ್ ಸರಬರಾಜಿನಲ್ಲಿ ಪ್ರಸ್ತುತ ಯಾವುದೇ ವ್ಯತ್ಯಯ ಉಂಟಾಗಿಲ್ಲ...
Latest News

ಮೈಸೂರು ತಾಲ್ಲೂಕು ಕಚೇರಿಗೆ ಪ್ರಾದೇಶಿಕ ಆಯುಕ್ತರ ಭೇಟಿ: ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

  ಮೈಸೂರು, ಮಾ.11:- ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ಮೈಸೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ವಿವಿಧ ರಾಜಸ್ವ ಹಾಗೂ ಆಡಳಿತಾತ್ಮಕ ಕಾರ್ಯಗಳ ಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಕಚೇರಿಯ ವಿವಿಧ ವಿಭಾಗಗಳನ್ನು ವೀಕ್ಷಿಸಿದ ಅವರು ದಾಖಲೆಗಳ ನಿರ್ವಹಣೆ, ಸಾರ್ವಜನಿಕ ಸೇವೆಗಳ ಒದಗಿಕೆ ಹಾಗೂ ಆನ್‌ಲೈನ್ ವ್ಯವಸ್ಥೆಗಳ ಕಾರ್ಯಾಚರಣೆ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು. ಪರಿಶೀಲನೆಯ ಬಳಿಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಭೆ...
Latest News

ಸರ್ಕಾರಿ ಕೆಲಸದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ: ಲಕ್ಷ್ಮೀಕಾಂತ ರೆಡ್ಡಿ ಜಿ

ಮೈಸೂರು, ಮಾ.11:-  ಖಾಸಗಿ ಸಂಸ್ಥೆಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುವವರಿಗೆ ಬೋನಸ್ ಸೇರಿದಂತೆ ವಿವಿಧ ಸೌಲಭ್ಯ ನೀಡಲಾಗುತ್ತದೆ. ಸರ್ಕಾರಿ ಕೆಲಸದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ 2023 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಕೆಲಸದಲ್ಲಿ...
Latest News

ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್ ಆಗ್ರಹ

ಮೈಸೂರು, ಮಾ. 11: ಸಾಂಸ್ಕೃತಿಕ ನಗರಿ ಮೈಸೂರಿಗೆ ಇದು ಖುಷಿ ಕೊಡುವ ಸುದ್ದಿ. ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು ದೇಶದ ಆರ್ಥಿಕತೆ ಕೊಡುಗೆಗಳನ್ನು ನೀಡಲು ಪ್ರಮುಖ ಪಾತ್ರ ವಹಿಸುವ ನಗರಗಳ ಅಭಿವೃದ್ಧಿಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಮೈಸೂರಿಗೂ ವಿಶೇಷ ಕೊಡುಗೆ ನೀಡಲು ನಿರ್ಧರಿಸಿದೆ ಮೈಸೂರನ್ನು “ನಗರ ಆರ್ಥಿಕ ವಲಯ” ಯೋಜನೆಗೆ ಸೇರ್ಪಡೆಗೊಳಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್...
Latest News

ಸರಳ ವ್ಯಕ್ತಿತ್ವದ ಹಿರಿಯ ಪತ್ರಕರ್ತ ಕೆ.ಜೆ. ಕುಮಾರ್ ವಿಧಿವಶ

ಮೈಸೂರು, ಮಾ.11: ಮೈಸೂರು ಪತ್ರಿಕಾ ವಲಯದ ಹಿರಿಯ ಸಿನಿ ಪತ್ರಕರ್ತರಾದ ಕೆ.ಜೆ. ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಮಾಧ್ಯಮ ಹಾಗೂ ಚಿತ್ರರಂಗದ ವಲಯದಲ್ಲಿ ದುಃಖದ ವಾತಾವರಣ ಆವರಿಸಿದೆ. ಹಲವು ದಶಕಗಳಿಂದ ಚಿತ್ರರಂಗದ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಅವರು ತಮ್ಮ ಸರಳತೆ, ನಿಷ್ಪಕ್ಷಪಾತ ವರದಿ ಶೈಲಿ ಮತ್ತು ಸ್ನೇಹಪರ ಸ್ವಭಾವದಿಂದ ಪತ್ರಕರ್ತರು ಹಾಗೂ ಸಿನಿತಾರೆಯರ ನಡುವೆ ವಿಶೇಷ ಗೌರವ ಪಡೆದಿದ್ದರು. ಬುಧವಾರ ಮಧ್ಯಾಹ್ನದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು...
Latest News

ಅನೈತಿಕ ಸಂಬಂಧದ ನೆರಳು… ಅರ್ಚಕನ ಹತ್ಯೆ ಪ್ರಕರಣ ಬಯಲು: ಪತ್ನಿ ಸೇರಿ ನಾಲ್ವರ ಬಂಧನ

ಅನೈತಿಕ ಸಂಬಂಧದ ನೆರಳು… ಅರ್ಚಕನ ಹತ್ಯೆ ಪ್ರಕರಣ ಬಯಲು: ಪತ್ನಿ ಸೇರಿ ನಾಲ್ವರ ಬಂಧ ಮಂಡ್ಯ, ಮಾ.11:-ಮಂಡ್ಯ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಅರ್ಚಕನ ನಿಗೂಢ ಕೊಲೆ ಪ್ರಕರಣವನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಅರ್ಚಕನ ಪತ್ನಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣವಾಗಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಮರಳಗಾಲ ಗ್ರಾಮದ ಬಳಿ ಮಾ.6 ರಂದು ಅರ್ಚಕ...
Latest News

ಕೃಷಿ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟಿಜೆನ್ಸಿ) ತಂತ್ರಜ್ಞಾನ ಅಳವಡಿಕೆ ವೀಕ್ಷಣೆ ಮಾಡಲು ಮಹಾರಾಷ್ಟ್ರ ರಾಜ್ಯಕ್ಕೆ ರೈತರ ತಂಡ ತೆರಳಲು ತೀರ್ಮಾನ

ಮೈಸೂರು :-  ಮಹಾರಾಷ್ಟ್ರ ರಾಜ್ಯದಲ್ಲಿ ಕಬ್ಬು ಬೇಸಾಯ ಮಾಡುವ ರೈತರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಸಿ ವ್ಯವಸಾಯ ಮಾಡುತ್ತಿರುವುದರಿಂದ ಉತ್ಪಾದನಾ ಏರಿಕೆಯಾಗಿದೆ. ಖರ್ಚು ಕಡಿಮೆಯಾಗಿದೆ ಇದರಿಂದ ರೈತರಿಗೆ ಹೆಚ್ಚು ಲಾಭವಾಗುತ್ತಿದೆ ಎಂಬ ಮಾಹಿತಿ ದೊರಕಿರುವುದು ರೈತರಿಗೆ ಸಂತಸವನ್ನುಂಟು ಮಾಡಿದೆ ಈ ಬಗ್ಗೆ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ್ ಕೃತಕ ಬುದ್ಧಿಮತ್ತೆ ಅಳವಡಿಸಿ ಯಶಸ್ವಿಯಾಗಿರುವ ಮಹಾರಾಷ್ಟ್ರ ರೈತರ ಜೊತೆ ದೂರವಾಣಿಯಲ್ಲಿ ಮಾತನಾಡಿ ಈ ಬಗ್ಗೆ ಹೆಚ್ಚು ಅರಿತು...
Latest News

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರ್ಣ: ಮೈಸೂರಿನಲ್ಲಿ ವಿಶೇಷ ಪೂಜೆ, ಅಭಿಮಾನಿಗಳ ಸಂಭ್ರಮ

ಮೈಸೂರು, ಮಾ.10:- ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ D. K. ಶಿವಕಯವಾರ್  ಅವರು ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಆರು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಾಚರಣೆ ನಡೆಸಿದರು. ನಗರದ ಅಗ್ರಹಾರದಲ್ಲಿರುವ ಪ್ರಸಿದ್ಧ 101 ಗಣಪತಿ  ದೇವಾಲಯದಲ್ಲಿ ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ವಿಶೇಷ ಪೂಜೆ ಮತ್ತು ಅರ್ಚನೆಗಳನ್ನು ನಡೆಸಲಾಯಿತು. ನಂತರ ಸಂಭ್ರಮದ ಅಂಗವಾಗಿ ಈಡಿಗಾಯಿ ಹೊಡೆದು,...
Latest News

2030ರ ವೇಳೆಗೆ ಶೇ.85 ಉದ್ಯೋಗಗಳಲ್ಲಿ ಬದಲಾವಣೆ: ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

ಮೈಸೂರು:-  ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ)ಯ ಮಹತ್ವ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೋಧನೆ–ಕಲಿಕೆಯ ಪ್ರಕ್ರಿಯೆಯಲ್ಲಿ ಎಐ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅರಿವು ಹೊಂದಬೇಕು ಎಂದು S. Vidyashankar, ಕುಲಪತಿ Visvesvaraya Technological University ಹೇಳಿದರು. ತಾಂತ್ರಿಕ ಪರಿವರ್ತನೆಗಳ ಪರಿಣಾಮವಾಗಿ 2030ರ ವೇಳೆಗೆ ಇಂದಿನ ಶೇ.85ರಷ್ಟು ಉದ್ಯೋಗಗಳಲ್ಲಿ ಬದಲಾವಣೆ ಸಂಭವಿಸಬಹುದು ಎಂದು ವಿವಿಧ ಅಧ್ಯಯನಗಳು ಸೂಚಿಸುತ್ತಿದ್ದು, ಎಲ್ಲಾ ವೃತ್ತಿಗಳಲ್ಲೂ ಮರುಕೌಶಲ್ಯ (Reskilling) ಅವಶ್ಯಕವಾಗಿದೆ ಎಂದು...
1 18 19 20 21 22 62
Page 20 of 62