ದಟ್ಟಗಳ್ಳಿ ತಿಮ್ಮಕ್ಕ ಉದ್ಯಾನವನದಲ್ಲಿ ಮಿಯಾವಾಕಿ ಕಿರು ಅರಣ್ಯಕ್ಕೆ ಚಾಲನೆ: 15,000ಕ್ಕೂ ಹೆಚ್ಚು ಗಿಡ ನೆಡುವ ಮಹತ್ವಾಕಾಂಕ್ಷಿ ಯೋಜನೆ
ಮೈಸೂರು, ಮಾರ್ಚ್ 27: ನಗರದಲ್ಲಿ ಹಸಿರು ವಲಯವನ್ನು ವಿಸ್ತರಿಸುವ ದಿಟ್ಟ ಹೆಜ್ಜೆಯಾಗಿ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ದಟ್ಟಗಳ್ಳಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಮಿಯಾವಾಕಿ ಮಾದರಿಯ ಕಿರು ಅರಣ್ಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಈ ಯೋಜನೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಅಡಿಯಲ್ಲಿ Toyota Accessories Development ME India Pvt. Ltd. ಸಂಸ್ಥೆಯ ಸಹಯೋಗದಲ್ಲಿ ಜಾರಿಗೊಳ್ಳುತ್ತಿದೆ. ಕಾರ್ಯಕ್ರಮದಲ್ಲಿ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್ ಅವರು...






