ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನ : ಜಿ.ಪಂ. ಮಾಜಿ ಸದಸ್ಯ ಅಮಿತ್ ವಿ ದೇವರಟ್ಟಿ
ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ.11:- ಜೆಡಿಎಸ್ ಪಕ್ಷದ ವತಿಯಿಂದ ಮತದಾರ ಪರಿಷ್ಕರಣೆ ಮತ್ತು ಬೂತ್ ಮಟ್ಟದ ಏಜೆಂಟ್ರುಗಳ ನೇಮಕ ನೇಮಕ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಮಿತ್ ವಿ ದೇವರೆಟ್ಟಿ ಮಾತನಾಡುತ್ತಿರುವುದು. ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಯೊಂದು ಬೂತ್ ಮಟ್ಟದಲ್ಲಿ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುವವರು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮೃತರಾದವರು ಗ್ರಾಮದಿಂದ ಹೊರ ಹೋಗಿರುವವರು ಅವರುಗಳನ್ನು ಮತದಾರ ಪಟ್ಟಿಯಿಂದ ಕೈ ಬಿಡಿಸಿ ಮತ್ತು ಹೊಸದಾಗಿ 18 ವರ್ಷ...






