ಕವಿವಾಣಿಯಂತೆ ‘ಸ್ತ್ರೀ’ ಅಂದರೆ ಅಷ್ಟೇ ಸಾಕೇ..?
ಮಹಿಳಾ ದಿನಾಚರಣೆ ಪ್ರಯುಕ್ತ ಕವಿವಾಣಿಯಂತೆ ‘ಸ್ತ್ರೀ’ ಅಂದರೆ ಅಷ್ಟೇ ಸಾಕೇ..? ಏನೆಂದು ಹೇಳುವುದು, ಹೇಗೆ ವರ್ಣಿಸುವುದು, ಯಾವ ರೀತಿಯಲ್ಲಿ ಚಿತ್ರಿಸುವುದು? ಪ್ರತಿಯೊಬ್ಬರ ಬದುಕಿನಲ್ಲೂ ‘ಅವಳು’ ಇಲ್ಲದೆ ಪರಿಪೂರ್ಣವೇ ಅಲ್ಲ. ನವಮಾಸ ಹೊತ್ತು ಜಗಕ್ಕೆ ಪರಿಚಯಿಸಿದ ತಾಯಿ. ಮೊದಲ ಬಾರಿಗೆ ಮಗುವ ಮುಖವ ಕಂಡು ಆರೈಕೆ ಮಾಡಿ, ತಾಯಿಯ ಮಡಿಲಲ್ಲಿ ಮಲಗಿಸಿದ ದಾದಿ. ಅಕ್ಕರೆಯಿಂದ ನೋಡಿಕೊಂಡ ವೈದ್ಯಕೀಯ ಸಿಬ್ಬಂದಿಗಳು. ನೀರುನಿಡಿ ಹೊಯ್ದು, ಚೆಂದದಿ ದೃಷ್ಟಿಬೊಟ್ಟು ಇಟ್ಟು, ಸಾಮ್ರಾಣಿಯ ಹೊಗೆಹಾಕಿ, ಜೋಲಿಯಲ್ಲಿಟ್ಟು ಜೋಗುಳವ...









