ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಬೇಟೆ: ಇಬ್ಬರ ಬಂಧನ
ಕಾಡು ಪ್ರಾಣಿಗಳನ್ನು ಬೇಟೆಯಾಡಲು ಉರುಳು ಹಾಕಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಡೀಪುರ ಹುಲಿಯೋಜನೆ ವ್ಯಾಪ್ತಿಯ ಗೋಪಾಲಸ್ವಾಮಿ ಬೆಟ್ಟ ವಲಯದ ಹಂಗಳ ಶಾಖೆಯ ಕಲೀಗೌಡನಹಳ್ಳಿ ಗಸ್ತಿನ ಕುರುಬರನಕಟ್ಟೆ ಕೆರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಸಿಬ್ಬಂದಿಗಳು ಗಸ್ತು ತಿರುಗುವಾಗ 15 ಉರುಳುಗಳು ಹಾಗೂ ಒಂದು ವಾಟರ್ ಕ್ಯಾನ್ ಪತ್ತೆಯಾಗಿದ್ದು, ಸೂಕ್ಷ್ಮವಾಗಿ ಗಮನಿಸಿ ಯಾರೋ ದುಷ್ಕರ್ಮಿಗಳು ವನ್ಯಜೀವಿಗಳನ್ನು ಬೇಟೆಯಾಡಲು ಉರುಳುಗಳನ್ನು ಹಾಕಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ...









