ಮೈಸೂರು: ಕಬ್ಬಿನ ಹಣ ಪಾವತಿ ವಿಳಂಬ : ಏಪ್ರಿಲ್ 21ರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ನಿರಂತರ ಧರಣಿಗೆ ರೈತರ ತೀರ್ಮಾನ
ಮೈಸೂರು, ಏಪ್ರಿಲ್ 13: ಕಬ್ಬು ಬೆಳೆಗಾರರಿಗೆ ಬಾಕಿ ಇರುವ ಹಣವನ್ನು ತಕ್ಷಣ ಪಾವತಿಸಬೇಕೆಂದು ಒತ್ತಾಯಿಸಿ ಏಪ್ರಿಲ್ 21ರಿಂದ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ನಿರಂತರ ಪ್ರತಿಭಟನೆ ಧರಣಿ ನಡೆಸಲು ರೈತ ಮುಖಂಡರು ತೀರ್ಮಾನಿಸಿದ್ದಾರೆ. ಈ ಸಂಬಂಧ ನಡೆದ ಸಭೆಯಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸರ್ಕಾರ ಮತ್ತು ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸರ್ಕಾರದ ಆದೇಶಗಳನ್ನು...


