ಕುಕ್ಕರಹಳ್ಳಿ ಕೆರೆ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡಕ್ಕೆ ವಿರೋಧ: ಪರಿಸರ ಸಂರಕ್ಷಣೆಗಾಗಿ ಪ್ರತಿಭಟನೆ
ಮೈಸೂರು, ಮಾ.16: ನಗರದ ಪ್ರಮುಖ ಪರಿಸರ ತಾಣವಾದ ಕುಕ್ಕರಹಳ್ಳಿ ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಣಿಜ್ಯ ಹಾಗೂ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೃದಯಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ ಪರಿಸರವನ್ನು ಸಂರಕ್ಷಿಸಬೇಕು ಹಾಗೂ ಈ ಪ್ರದೇಶದಲ್ಲಿ ಯಾವುದೇ ರೀತಿಯ ವಾಣಿಜ್ಯ ಕಟ್ಟಡಗಳು ಮತ್ತು ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ವೇಳೆ...







