ಆರೋಗ್ಯ ನಂದನ ಕಾರ್ಯಕ್ರಮ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಕೋವಿಡ್-19 ಎರಡನೇ ವ್ಯಾಪಕವಾಗಿ ಹರಡಿದ್ದು, ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವ ಸಂಭವ ಇರುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮಕ್ಕಳು, ಹದಿಹರೆಯದವರು, ಗರ್ಭಿಣಿಯರ ಮತ್ತು ಬಾಣಂತಿಯ ಕುರಿತಾಗಿ ವಿಶೇಷ ಗಮನ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಆರೋಗ್ಯ ನಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನೂತನವಾಗಿ ಆರಂಭವಾದ ಆರೋಗ್ಯ...