ಕೊರೊನಾ ಎರಡನೇ ಅಲೆಯಿಂದ ಹಲವಾರು ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಸಾವಿರಾರು ಜನ ತಮ್ಮ ಕುಟುಂಬಸ್ಥರು ತನ್ನವರನ್ನು ಕಳೆದುಕೊಂಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಸೆಲೆಬ್ರಿಟಿಗಳು ಜನರ ಸೇವೆ ಮಾಡಲು ಮುಂದೆ ಬಂದಿರುವುದು ನಿಜಕ್ಕೂ ಶ್ಲಾಘನೀಯ.
ಸ್ಯಾಂಡಲ್‍ವುಡ್ ಕಲಾವಿದರಾದ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ನಾಡಿನ ಜನತೆಗೆ ಸಹಾಯ ಹಸ್ತ ಚಾಚಿದ್ದಾರೆ. ಕೊರೊನಾ ವಾರಿಯರ್ ಗಳಾಗಿ ‘ಭುವನಂ ಕೋವಿಡ್ ಹೆಲ್ಪ್ 24/7’ ಎಂಬ ಗ್ರೂಪ್ಸ್ ನ ಮುಖಾಂತರ ಸೋಂಕಿತರಿಗೆ ಹಲವಾರು ರೀತಿಯಲ್ಲಿ ನೆರವಾಗುತ್ತಿದ್ದಾರೆ.
ಆಕ್ಸಿಜನ್, ಹಾಸ್ಪಿಟಲ್ ಬೆಡ್, ಮೆಡಿಸಿನ್ಸ್ ಗಳ ವಿವರಗಳನ್ನೆಲ್ಲಾ ಸರಿಯಾದ ಸಮಯಕ್ಕೆ ಒದಗಿಸಿ, ಬಡವರು, ನಿರ್ಗತಿಕರಿಗೆ ಆಹಾರ ಪದಾರ್ಥಗಳ ಕಿಟ್ ಗಳನ್ನು ಕೂಡ ವಿತರಣೆ ಮಾಡುತ್ತಿದ್ದಾರೆ. ಹಾಗೂ ಸ್ಥಳೀಯರಿಗೆ ಮತ್ತು ಹೋಂ ಗಾರ್ಡ್‍ಗಳಿಗೆ ಆಹಾರ ಪದಾರ್ಥಗಳ ಕಿಟ್ ಮತ್ತು ಮಾಸ್ಕ್ ಅನ್ನು ನಟ ಭುವನ್ ಮತ್ತು ಹರ್ಷಿಕಾ ಪೂಣಚ್ಚ ವಿತರಣೆ ಮಾಡಿದ್ದಾರೆ.
ಭುವನಂ ಸಂಸ್ಥೆಯ ವತಿಯಿಂದ ಹಳ್ಳಿ ಹಳ್ಳಿಗಳಿಗೆ ತೆರಳಿ ಆರೋಗ್ಯ ಇಲಾಖಾ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಆರ್ಥಿಕ ಸಂಕಷ್ಟದಿಂದ ನರಳುತ್ತಿರುವವರಿಗೆ ದಿನಸಿ ಪದಾರ್ಥ, ತರಕಾರಿ ಹಾಗೂ ಔಷಧಿಗಳನ್ನು ಒದಗಿಸುತ್ತಿದ್ದಾರೆ.
ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೋವಿಡ್ ಸೋಂಕಿನಿಂದ ಬಳಲುತ್ತಿರುವವರ ಮನೆಗಳಿಗೆ ತಾವೇ ಖುದ್ದು ಭೇಟಿ ನೀಡಿ ಆಹಾರ ಸಾಮಗ್ರಿ ಮತ್ತು ಔಷಧಗಳನ್ನು ಅಗತ್ಯವಸ್ತುಗಳನ್ನು ಹಂಚಿದ್ದಾರೆ.
Follow us on https://facebook.com/askmysuru for more updates