ಮೈಸೂರು : ಮಾ. 12 : ಕಿಡ್ನಿಯ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಕರೆ ನೀಡಿದರು....
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಂಸದ ಯದುವೀರ್ ಒಡೆಯರ್ ಮೈಸೂರು, ಮಾ. 12: ಜಲ ಜೀವನ್ ಮಿಷನ್ (JJM) 2.0 ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವಲಯದಲ್ಲಿ ಸುಧಾರಣೆಗಳ ಮೇಲೆ ಗಮನಹರಿಸಿ, ಯೋಜನೆಯ ವೆಚ್ಚವನ್ನು ಹೆಚ್ಚಿಸುವ ಮೂಲಕ ಮತ್ತು ಅನುಷ್ಠಾನವನ್ನು ಮರು ರಚಿಸುವ ಮೂಲಕ ಜಲ ಜೀವನ್ ಮಿಷನ್ ಅವಧಿಯನ್ನು ಡಿಸೆಂಬರ್ 2028 ರವರೆಗೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್ ಒಡೆಯರ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಸುಸ್ಥಿರ ಗ್ರಾಮೀಣ ಪೈಪ್‌ಲೈನ್ ಕುಡಿಯುವ ನೀರು ಪೂರೈಕೆಗಾಗಿ ‘ಜಲ ಜೀವನ್ ಮಿಷನ್’ (JJM) ಯೋಜನೆಯನ್ನು ಮರುಸಂಘಟಿಸುವ ಜಲಶಕ್ತಿ ಸಚಿವಾಲಯದ ಪ್ರಸ್ತಾವನೆಗೆ...
ಮೈಸೂರು, ಮಾ.12:- ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತೈಲ ಸರಬರಾಜು ಕಂಪನಿಗಳಾದ ಎಚ್ ಪಿ.ಸಿ.ಎಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ದೊಂದಿಗೆ ಸಭೆ ನಡೆಸಿ ಅವರಿಂದ ಮಾಹಿತಿ ಪಡೆದು ಜಿಲ್ಲೆಯಲ್ಲಿ ಗೃಹಬಳಕೆಯ ಸಿಲಿಂಡರ್ ಸರಬರಾಜಿನಲ್ಲಿ ಪ್ರಸ್ತುತ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದರು. ಸಾರ್ವಜನಿಕರು ಗೃಹಬಳಕೆ ಅನಿಲದ ಕೊರತೆ ಉಂಟಾಗಬಹುದು ಎಂಬ ಭಯದಿಂಸದ ಮುಂಗಡವಾಗಿ ಅಡುಗೆ ಅನಿಲ ಸಿಲೆಂಡರ್ ಬುಕ್ಕಿಂಗ್ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ದಕ್ಕೆ ಇರುವುದಿಲ್ಲ ಎಂದು ಖಚಿತಪಡಿಸಿದರು. ಜಿಲ್ಲೆಯಲ್ಲಿ ಅಡುಗೆ ಅನಿಲವನ್ನು ಅಕ್ರಮವಾಗಿ ಸಂಗ್ರಹಿಸುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು...
ಮೈಸೂರು, ಮಾ.11:- ಖಾಸಗಿ ಸಂಸ್ಥೆಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುವವರಿಗೆ ಬೋನಸ್ ಸೇರಿದಂತೆ ವಿವಿಧ ಸೌಲಭ್ಯ ನೀಡಲಾಗುತ್ತದೆ. ಸರ್ಕಾರಿ ಕೆಲಸದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ...
ಮೈಸೂರು, ಮಾ.11: ಮೈಸೂರು ಪತ್ರಿಕಾ ವಲಯದ ಹಿರಿಯ ಸಿನಿ ಪತ್ರಕರ್ತರಾದ ಕೆ.ಜೆ. ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಮಾಧ್ಯಮ ಹಾಗೂ ಚಿತ್ರರಂಗದ ವಲಯದಲ್ಲಿ ದುಃಖದ ವಾತಾವರಣ ಆವರಿಸಿದೆ. ಹಲವು ದಶಕಗಳಿಂದ ಚಿತ್ರರಂಗದ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಅವರು ತಮ್ಮ ಸರಳತೆ, ನಿಷ್ಪಕ್ಷಪಾತ ವರದಿ ಶೈಲಿ ಮತ್ತು ಸ್ನೇಹಪರ ಸ್ವಭಾವದಿಂದ ಪತ್ರಕರ್ತರು ಹಾಗೂ ಸಿನಿತಾರೆಯರ ನಡುವೆ ವಿಶೇಷ ಗೌರವ ಪಡೆದಿದ್ದರು. ಬುಧವಾರ ಮಧ್ಯಾಹ್ನದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು ತಕ್ಷಣವೇ ಮೈಸೂರಿನ ಸರಸ್ವತಿಪುರಂ ಪ್ರದೇಶದಲ್ಲಿರುವ ಕಾಮಾಕ್ಷಿ ಆಸ್ಪತ್ರೆಗೆ ಕರೆದೊಯ್ಯಿದರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಈ ಸುದ್ದಿ ತಿಳಿಯುತ್ತಿದ್ದಂತೆ ಪತ್ರಿಕಾ ವಲಯದ ಹಲವರು ಆಸ್ಪತ್ರೆಗೆ ಧಾವಿಸಿ ತಮ್ಮ ಅಂತಿಮ ಗೌರವ ಸಲ್ಲಿಸಿದರು. ಕೆ.ಜೆ. ಕುಮಾರ್ ಅವರು ಹಲವು ವರ್ಷಗಳಿಂದ ಕನ್ನಡ ಮತ್ತು...
ಅನೈತಿಕ ಸಂಬಂಧದ ನೆರಳು… ಅರ್ಚಕನ ಹತ್ಯೆ ಪ್ರಕರಣ ಬಯಲು: ಪತ್ನಿ ಸೇರಿ ನಾಲ್ವರ ಬಂಧ ಮಂಡ್ಯ, ಮಾ.11:-ಮಂಡ್ಯ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಅರ್ಚಕನ ನಿಗೂಢ ಕೊಲೆ ಪ್ರಕರಣವನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಅರ್ಚಕನ ಪತ್ನಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣವಾಗಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಮರಳಗಾಲ ಗ್ರಾಮದ ಬಳಿ ಮಾ.6 ರಂದು ಅರ್ಚಕ ಸಿದ್ದಲಿಂಗಪ್ಪ ಅವರ ಮೃತದೇಹ ಪತ್ತೆಯಾಗಿದ್ದು, ಆರಂಭದಲ್ಲಿ ಇದನ್ನು ಅಪಘಾತ ಎಂದು ಊಹಿಸಲಾಗಿತ್ತು. ಆದರೆ ಪ್ರಕರಣದ ಹಿನ್ನೆಲೆ ಅನುಮಾನಾಸ್ಪದವಾಗಿದ್ದ ಕಾರಣ ಪೊಲೀಸರು ಸವಿಸ್ತಾರ ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಸಿದ್ದಲಿಂಗಪ್ಪ ಅವರ ಪತ್ನಿ ಶಾಲಿನಿ ಮತ್ತು ಆಕೆಯ ಪ್ರಿಯಕರ ಟಿಪ್ಪರ್ ಚಾಲಕ ಹರೀಶ ಅವರ ನಡುವಿನ ಅನೈತಿಕ ಸಂಬಂಧವೇ ಕೊಲೆಯ ಮೂಲ ಕಾರಣ ಎಂದು ಪತ್ತೆಯಾಗಿದೆ. ಮೃತ...