ರಸ್ತೆ ಮತ್ತು ಬಾಕ್ಸ್ ಡ್ರೈನ್ ಕಾಮಗಾರಿಗೆ ಕೃಷ್ಣರಾಜ ಶಾಸಕ ಟಿ.ಎಸ್. ಶ್ರೀವತ್ಸರವರಿಂದ ಗುದ್ದಲಿಪೂಜೆ
ಮೈಸೂರು: ನಗರದ ಕೆ.ಆರ್ ಕ್ಷೇತ್ರದ ವಾರ್ಡ್ ನಂಬರ್ 59ರಲ್ಲಿ ರಸ್ತೆ ಹಾಗೂ ಬಾಕ್ಸ್ ಡ್ರೈನ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಅವರು ಇಂದು ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಶ್ರೀರಾಂಪುರ ಎಲ್‌ಐಜಿ ಮನೆಗಳ ಮುಂಭಾಗ ಹಾಗೂ 807 ಹುಡ್ಕೋ ಬಡಾವಣೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹತ್ತಿರ ಈ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 72 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಯೋಜನೆಯಡಿ ಹೊಸ ರಸ್ತೆ ನಿರ್ಮಾಣ ಹಾಗೂ ಬಾಕ್ಸ್ ಡ್ರೈನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಭಾಗದಲ್ಲಿ ಮಳೆಯ ಸಮಯದಲ್ಲಿ ನೀರು ನಿಂತು ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಬೇಡಿಕೆಗೆ ಸ್ಪಂದಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು. ಈ ಕಾಮಗಾರಿಗಳು ಪೂರ್ಣಗೊಂಡ ನಂತರ ಮಳೆಯ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಆಗುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ....




