ಮೈಸೂರು, ಮಾ.04:- ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆಯಡಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯುವಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ....
ಬೆಂಗಳೂರು, ಮಾರ್ಚ್ 4: – ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್. ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಮಾರ್ಚ್ 25 ರಿಂದ 27ರ ವರೆಗೆ ಮೈಸೂರಿನ ಇನ್‌ಫೋಸಿಸ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಬಹುದು. ಆಸಕ್ತ ಪತ್ರಕರ್ತೆಯರು ಗೂಗಲ್ ಫಾರ್ಮ್ https://forms.gle/tozr4GxUQibDHBvk9 ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ. ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಪತ್ರಕರ್ತೆಯರು ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಅಥವಾ ಕಚೇರಿಯ ಅಧಿಕೃತ ಗುರುತಿನಚೀಟಿ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ...
ಮೈಸೂರು: ನಗರದ ಕೆ.ಆರ್ ಕ್ಷೇತ್ರದ ವಾರ್ಡ್ ನಂಬರ್ 59ರಲ್ಲಿ ರಸ್ತೆ ಹಾಗೂ ಬಾಕ್ಸ್ ಡ್ರೈನ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಅವರು ಇಂದು ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಶ್ರೀರಾಂಪುರ ಎಲ್‌ಐಜಿ ಮನೆಗಳ ಮುಂಭಾಗ ಹಾಗೂ 807 ಹುಡ್ಕೋ ಬಡಾವಣೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹತ್ತಿರ ಈ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 72 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಯೋಜನೆಯಡಿ ಹೊಸ ರಸ್ತೆ ನಿರ್ಮಾಣ ಹಾಗೂ ಬಾಕ್ಸ್ ಡ್ರೈನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಭಾಗದಲ್ಲಿ ಮಳೆಯ ಸಮಯದಲ್ಲಿ ನೀರು ನಿಂತು ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಬೇಡಿಕೆಗೆ ಸ್ಪಂದಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು. ಈ ಕಾಮಗಾರಿಗಳು ಪೂರ್ಣಗೊಂಡ ನಂತರ ಮಳೆಯ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಆಗುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ....
ಮೈಸೂರು ಮಾ4 : ವರುಣಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಿ ಸಣ್ಣನೀರಾವರಿ ಇಲಾಖೆಯಿಂದ ಅಭಿವೃದ್ಧಿಗೊಳಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ|| ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣಾ ಕ್ಷೇತ್ರದ ತಾಯೂರು ಪಂಚಾಯಿತಿ ವ್ಯಾಪ್ತಿಯ ಗೆಜ್ಜಗನಹಳ್ಳಿ, ಹಾರೋಪುರ, ಸಾಲುಂಡಿ ಇಗ್ಲಿ ತಾಯೂರು ಗ್ರಾಮಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಗೆಜ್ಜಗನಹಳ್ಳಿಯಲ್ಲಿ ಬಸ್ ನಿಲುಗಡೆ ಕೇಳಿದ್ದೀರಿ, ನಾಲೆಗಳ ಅಭಿವೃದ್ಧಿಪಡಿಸಲು ತಿಳಿಸಿದ್ದೀರಿ, ಚರಂಡಿ ಸ್ವಚ್ಛಗೊಳಿಸಬೇಕು, ಮಕ್ಕಳಿಗೆ ಕೆಲಸ ಕೊಡಿಸಿ ಎಂದಿದ್ದೀರಿ ಅದೇ ರೀತಿ ಹಾರೋಪುರ ಗ್ರಾಮದ ರಸ್ತೆ ಅಭಿವೃದ್ಧಿ, ಕೆರೆ ಅಭಿವೃದ್ಧಿ ದೇವಸ್ಥಾನಕ್ಕೆ ಕಾಂಪೌಂಡ್, ಸ್ಮಶಾನಕ್ಕೆ ಜಾಗ, ಸೈಟ್ ಬೇಕು ಎಂದು ಕೇಳಿದ್ದೀರಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಮಾತನಾಡಿ ಪರಿಹರಿಸಲು ಪ್ರಯತ್ನಿಸುತ್ತೇನೆ. ಇಲ್ಲೇ ಇರುವ ತಾಲ್ಲೂಕುಮಟ್ಟದ ಅಧಿಕಾರಿಗಳು ನಿಮ್ಮ ಮಟ್ಟದಲ್ಲಿ ಬಗೆಹರಿಯುವ ಸಮಸ್ಯೆಗಳನ್ನು ತಕ್ಷಣ ಸಾರ್ವಜನಿಕರಿಗೆ ಮಾಡಿಕೊಡಿ. ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು,...
ಮೈಸೂರು: ರಾಜ್ಯದ ತಂಬಾಕು ರೈತರು ಸಂಕಷ್ಟಕ್ಕೆ ಸಿಲುಕದಂತೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿ ತಕ್ಷಣವೇ ತಂಬಾಕು ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್...
ಮೈಸೂರು, ಮಾ.೦3:- ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಜನರ ಅಭಿವೃದ್ಧಿಗೆ ಮಾಡುವ ಯೋಜನೆಗಳು ನೇರವಾಗಿ ಫಲಾನುಭವಿಗೆ ತಲುಪುವಂತೆ ಮಾಡಿದಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಾಧ್ಯಾಪಕರಾದ ಪ್ರೊ. ಡಿ. ಆನಂದ್ ತಿಳಿಸಿದರು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ರಾಜ್ಯ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಕರ್ನಾಟಕದ ನೆರೆಯ ರಾಜ್ಯಗಳಲ್ಲಿ ಬುಡಕಟ್ಟು ಜನರ ಕಲ್ಯಾಣ ಕಾರ್ಯಕ್ರಮಗಳ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇರಳ, ಆಂದ್ರ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡುಗಳಲ್ಲಿ ಬುಡಕಟ್ಟು ಜನರಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿವೆ. ರಾಜ್ಯ ಸರ್ಕಾರ SEP, TSP ಯೋಜನೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ ಎಲ್ಲಾ ರಾಜ್ಯಗಳು ಒಟ್ಟಿಗೆ ಸೇರಿ ಯೋಜನೆಗಳನ್ನು ರೂಪಿಸಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿಯೂ ಬುಡಕಟ್ಟು ಜನರ...
ಮೈಸೂರು, ಮಾ.೦3:- ಅಧಿಕಾರಿಗಳು ಜನರನ್ನು ಕಛೇರಿಯಿಂದ ಕಛೇರಿಗೆ ಅಲೆಸದೆ ಕಾಲಮಿತಿಯೊಳಗೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣಾ ಕ್ಷೇತ್ರದ ಶಿವಪುರ, ಹಾರೋಹಳ್ಳಿ, ಲಕ್ಷ್ಮೀಪುರ, ಹಳ್ಳಿಕೆರೆಹುಂಡಿ, ಮೆಲ್ಲಹಳ್ಳಿ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕೆಲವು ಸಮಸ್ಯೆಗಳನ್ನು ಅಲ್ಲೇ ಇದ್ದು ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸಲು ಸೂಚಿಸಿ ಮಾತನಾಡಿದ ಅವರು ವರುಣಾ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿ ಅಭಿವೃದ್ಧಿ ಪಡಿಸಿದ್ದರೂ ಸಹ ಇನ್ನೂ ಸಮಸ್ಯೆಗಳು ಇವೆ. ಶಾಲಾ ಕಟ್ಟಡ ಕೇಳಿದ್ದೀರಿ, ಸ್ಮಶಾನಕ್ಕೆ ಜಾಗ, ರಸ್ತೆ, ವಿದ್ಯುತ್ ಕಂಬಗಳು, ಖಾತೆ ಮಾಡಿಸಿಕೊಡಿ ಎಂದು ಕೇಳಿದ್ದೀರಿ. ನಿಮ್ಮ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಿಕೊಡುತ್ತೇವೆ. ನಮ್ಮ ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಿರುವುದರಿಂದ ಗ್ರಾಮೀಣ ಭಾಗದಲ್ಲಿ ಜನರ ನೆಮ್ಮದಿಯಾಗಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ....