Latest News

ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು

AskMysuru 06/09/2021

ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು.  ಸೋಮವಾರ ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯ ಮತ ಎಣಿಕೆ ನಡೆದು ಫಲಿತಾಂಶ ಹೊರ ಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ರಜನಿ  ಅಣ್ಣಯ್ಯ 4,113 ಮತಗಳನ್ನ ಪಡೆದು ಜಯಭೇರಿ ಬಾರಿಸಿದ್ದಾರೆ. ಇನ್ನು ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡಿದ್ದ ಜೆಡಿಎಸ್‌ ಅಭ್ಯರ್ಥಿ ಎಸ್‌.ಲೀಲಾವತಿ ಅವರು 2,116 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಈ ವಾರ್ಡ್‌ನಲ್ಲಿ ಪ್ರಾಬಲ್ಯವಿಲ್ಲದ ಬಿಜೆಪಿ ಅಭ್ಯರ್ಥಿ ಶೋಭಾ ಅವರು 601 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ. ಉಪ ಚುನಾವಣೆಯಲ್ಲಿ ಜೆಡಿಎಸ್‌ಗೆ ಹೀನಾಯ ಸೋಲಾಗಿದೆ. ಶಾಸಕ ಸಾ.ರಾ.ಮಹೇಶ್ ಸೇರಿದಂತೆ ಜೆಡಿಎಸ್‌ನ ನಾಯಕರಿಗೆ ಭಾರೀ ಮುಖಭಂಗವಾಗಿದೆ. ಜೆಡಿಎಸ್‌ನ ಬಂಡಾಯ ಶಾಸಕ ಜಿ.ಟಿ.ದೇವೇಗೌಡರ ಕೃಪಾ‌ಕಟಾಕ್ಷದಿಂದ ಕಾಂಗ್ರೆಸ್ ಅಭ್ಯರ್ಥಿ ರಜನಿ ಗೆಲುವು ಸಾಧಿಸಿದ್ದಾರೆ.

sri krishnadevaraya hampi
Contact us for classifieds and ads : +91 9742974234



 
error: Content is protected !!