ಆಟೋರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರ ಪರಿಹಾರ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
Ask ಮೈಸೂರು - 29th May, 2021
ಕೋವಿಡ್-19 ಎರಡನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ಆಟೋರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರು ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ವಿತರಣೆ ಮಾಡುವ ಸಲುವಾಗಿ ರಾಜ್ಯ ಸರ್ಕಾರ ಸಹಾಯ ಧನ ಘೋಷಣೆ ಮಾಡಿದೆ. ಈ ಬಾರಿ ಚಾಲಕರ ಬ್ಯಾಂಕ್ ಗಳಿಗೆ ನೇರವಾಗಿ ವರ್ಗಾವಣೆ ಮಾಡಲು ಸರ್ಕಾರ ಸಿದ್ದತೆಯನ್ನು ಮಾಡಿಕೊಂಡಿದೆ.
ಪರಿಹಾರ ಧನವನ್ನು ನೀಡಲು ಸೇವಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಗಳ ಆಧಾರದ ಮೇಲೆ ಅವರ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಕೇವಲ ಆನ್ಲೈನ್ ಮುಕಾಂತ್ರವಷ್ಟೇ ಅರ್ಜಿ ಸಲ್ಲಿಸತಕ್ಕದ್ದು.
ಈ ಕೆಳಗೆ ನೀಡಿರುವ ಸೇವಾ ಸಿಂಧು ಪೋರ್ಟಲ್ URL ನಲ್ಲಿ ಸೂಕ್ತ ದಾಖಲೆ ಆಧಾರ್, ಚಾಲನಾ ಅನುಜ್ಞಾ ಪತ್ರದ ವಿವರಗಳು, ಬ್ಯಾಂಕ್ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
https://sevasindhu.karnataka.gov.in/
Kindly Share & Follow askmysuru for more updates.