Latest News

ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ ಘೋಷಣೆ

Ask Mysuru June 07th, 2021.

ಬಡವರು ಯಾರೂ ಹಸಿವಿನಿಂದ ಮಲಗಬಾರದು, ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್​ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

sri krishnadevaraya hampi

ಬಡವರ ಎಲ್ಲ ಅಗತ್ಯಗಳನ್ನು ಗಮನಿಸಿ, ನಾವು ಅವರ ಜೊತೆಗೆ ಇರುತ್ತೇವೆ. ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಧಾನ್ಯ ವಿತರಣೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೊಷಿಸಿದರು.

ಜೂನ್ 21ರ ಯೋಗ ದಿನದ ನಂತರ ದೇಶದಲ್ಲಿ ಲಸಿಕೆ ವಿತರಣಾ ಅಭಿಯಾನ ಹೊಸ ವೇಗ ಪಡೆಯಲಿದೆ. ಭಾರತ ಸರ್ಕಾರವೇ ಎಲ್ಲ ರಾಜ್ಯಗಳಿಗೂ ಉಚಿತವಾಗಿ ಕೊಡಲಿದೆ. ಭಾರತದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ ಕೊಡಲಾಗುವುದು. ಲಸಿಕೆ ವಿತರಣೆಯಲ್ಲಿ ಬಡವರು, ಮಧ್ಯಮ ವರ್ಗದವರು ಎಂಬ ಭೇದ ಇರುವುದಿಲ್ಲ.

ಆತ್ಮನಿರ್ಭರ್​ ಪ್ಯಾಕೇಜ್​ನಡಿ ಕೊವಿಡ್​ ಪ್ಯಾಕೇಜ್​ ಮೂಲಕ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದೇವೆ. ದೇಶದ 7 ಕಂಪನಿಗಳು ಲಸಿಕೆ ತಯಾರಿಸುತ್ತಿವೆ. 3 ಟ್ರಯಲ್​ಗಳು ನಡೆಯುತ್ತಿವೆ.

ಕೆಲ ತಜ್ಞರ ಮೂಲಕ ಮಕ್ಕಳ ಸುರಕ್ಷೆ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ಮಕ್ಕಳಿಗೆ ಲಸಿಕೆ ನೀಡುವ ಟ್ರಯಲ್ ನಡೆಯುತ್ತಿದೆ. ಮೂಗಿನ ಮೂಲಕ ಕೊಡುವ (ನೇಸಲ್) ಲಸಿಕೆಯ ಟ್ರಯಲ್ ಸಹ ನಡೆಯುತ್ತಿದೆ. ಈ ಲಸಿಕೆಯಲ್ಲಿ ಸಫಲತೆ ಸಿಕ್ಕರೆ ಭಾರತದಲ್ಲಿ ಲಸಿಕೆ ಅಭಿಯಾನ ಇನ್ನಷ್ಟು ವೇಗ ಪಡೆಯುತ್ತದೆ. ಇಷ್ಟು ಕಡಿಮೆ ಸಮಯದಲ್ಲಿ ಲಸಿಕೆ ಮಾಡುವುದರಿಂದ ವಿಶ್ವದ ಜನಸಮುದಾಯಕ್ಕೆ ಅನುಕೂಲವಾಗಿದೆ ಎಂದು ಅವರು ವಿವರಿಸಿದರು.

Contact us for classifieds and ads : +91 9742974234



 
error: Content is protected !!