Latest News

ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ಯಥಾಸ್ಥಿತಿ ಮುಂದುವರಿಕೆ

Ask ಮೈಸೂರು

ಮೈಸೂರು ಜಿಲ್ಲೆಯಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿದ್ದು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧ ಮುಂದುವರೆಯಲಿದೆ.

sri krishnadevaraya hampi

ಸೋಮವಾರದಿಂದಲೇ 16 ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್. ಎಸಿ ಬಳಸದೇ ಹೋಟೆಲ್‌, ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ, ಜಿಮ್‌ಗಳಲ್ಲಿ ಶೇ.50ರಷ್ಟು ಅನುಮತಿ, ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ, ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.

ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ.
ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್.

ಆದರೆ ಶೇ 5 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಈ ಸಡಿಲಿಕೆ ಅನ್ವಯ ಆಗುವುದಿಲ್ಲ. ಇಂದು ಘೋಷಿಸಿರುವ ನಿಯಮಗಳು ಜುಲೈ 5ರವರೆಗೂ ಮುಂದುವರೆಯಲಿದೆ.

ಶೇ.50ರಷ್ಟು ಸಿಬ್ಬಂದಿ ಕೆಲಸ ನಿರ್ವಹಿಸಬಹುದು. ಸಿನಿಮಾ ಮಂದಿರ, ದೇಗುಲಗಳಲ್ಲಿ ನಿರ್ಬಂಧ ಮುಂದುವರಿಕೆ ಆಗಲಿದೆ.

ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಮುಂದುವರೆಯಲಿದೆ
ಪ್ರತಿದಿನ ಸಂಜೆ 7ಗಂಟೆಯಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಎಲ್ಲ ಜಿಲ್ಲೆಗಳಲ್ಲೂ ಮುಂದುವರೆಯಲಿದೆ. ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಕರ್ಫ್ಯೂ ಸಹ ರಾಜ್ಯದಲ್ಲಿ ಎಂದಿನಂತೆ ಮುಂದುವರೆಯಲಿದೆ.

Contact us for classifieds and ads : +91 9742974234



 
error: Content is protected !!