Health

ಆರೋಗ್ಯ ನಂದನ ಕಾರ್ಯಕ್ರಮ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

AskMysuru 02/09/2021

ಕೋವಿಡ್-19 ಎರಡನೇ ವ್ಯಾಪಕವಾಗಿ ಹರಡಿದ್ದು, ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವ ಸಂಭವ ಇರುವುದಾಗಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮಕ್ಕಳು, ಹದಿಹರೆಯದವರು, ಗರ್ಭಿಣಿಯರ ಮತ್ತು ಬಾಣಂತಿಯ ಕುರಿತಾಗಿ ವಿಶೇಷ ಗಮನ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಆರೋಗ್ಯ ನಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

sri krishnadevaraya hampi

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನೂತನವಾಗಿ ಆರಂಭವಾದ ಆರೋಗ್ಯ ನಂದನ ಕಾರ್ಯಕ್ರಮ ಆಗಸ್ಟ್ 15 ರಿಂದ ಆರಂಭವಾಗಿದ್ದು, ಸೆಪ್ಟೆಂಬರ್ 15 ರವರೆಗೆ ನಡೆಯಲಿದೆ.

ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಗ್ರಾಮೀಣ ಅಭಿವೃದ್ದಿ, ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ದಿ ಇಲಾಖೆಗಳ ಸಮನ್ವಯದೊಂದಿಗೆ ಕೈಗೊಂಡಿದ್ದು, ಜಿಲ್ಲೆಯಲ್ಲಿ 6,50,842 ಮಕ್ಕಳ ಪೈಕಿ ಇದುವರೆಗೂ 63,801 ಮಕ್ಕಳ ಆರೋಗ್ಯ ತಪಾಸಣೆÉ ನಡೆಸಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೇವೆಗಳನ್ನು ಪಡೆದುಕೊಳ್ಳಬೇಕು ಎಂದು ಡಿ.ಹೆಚ್.ಓ ಮನವಿ ಮಾಡಿದ್ದಾರೆ.

ಮಕ್ಕಳ ಆರೋಗ್ಯ ತಪಾಸಣೆ : 0-18 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ (ಖಾಸಗಿ ಶಾಲೆ ಮಕ್ಕಳನ್ನು ಒಳಗೊಂಡಂತೆ) ಲಸಿಕಾಕರಣ, 0-5 ವರ್ಷ, 10-16 ವರ್ಷದೊಳಗಿನ ಮಕ್ಕಳಿಗೆ Missed Dose of Routine Immunization ಮಾಡಿಸುವುದು, ಕೋವಿಡ್-19 ಲಸಿಕೆಯನ್ನು ತಗೆದುಕೊಂಡಿಲ್ಲದ ಶಾಲಾ, ಕಾಲೇಜು ಶಿಕ್ಷಕರು ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಲಸಿಕಾಕರಣ, ಲಸಿಕೆ ತೆಗೆದುಕೊಂಡಿಲ್ಲದ SAM/ MAM / Comorbitiy ಇರುವಂತಹ ಮಕ್ಕಳ ಪೋಷಕರಿಗೆ ಆದ್ಯತೆ ಮೇರೆಗೆ ಲಸಿಕೆಯನ್ನು ನೀಡಲಾಗುವುದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ದೊರಕಿಸುವ ಸಂಬಂಧ, ಮಧ್ಯಾಹ್ನದ ಉಪಾಹಾರ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ಪಡಿತರ ದೊರಕಿಸುವ ಸಂಬಂಧ ಕ್ರಮ ಕೈಗೊಳ್ಳುವುದು, ಈ ಕಾರ್ಯ ಚಟುವಟಿಕೆಗಳನ್ನು ಸಂಬಂಧಪಟ್ಟ ಪ್ರಾಥಾಮಿಕ ಆರೋಗ್ಯ ಕೇಂದ್ರಗಳಲ್ಲಿ ರಚಿಸಲ್ಪಟ್ಟ ತಂಡಗಳಿಂದ ನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact us for classifieds and ads : +91 9742974234



 
error: Content is protected !!