ದಸರಾ ಪೂರ್ವಭಾವಿ ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿಯಿಂದ ಲಾಂಚ್
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2024ರ ಅಧಿಕೃತ ಹಾಡನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಬಿಡುಗಡೆ ಮಾಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ ದಸರಾ ಪೂರ್ವಭಾವಿ ಸಭೆಯಲ್ಲಿ ಹಾಡನ್ನು ಲಾಂಚ್ ಮಾಡಲಾಯಿತು. ಬಳಿಕ ಸಚಿವ ಶಿವರಾಜ ತಂಗಡಗಿ ಮಾತನಾಡಿ ಮೈಸೂರು ದಸರಾ ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಸರ್ಕಾರವು ವಿಶೇಷ ಒತ್ತು ನೀಡಿದೆ. ಈ ಬಾರಿಯ ದಸರಾ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿ, ದಸರಾ ಅಧಿಕೃತ ಹಾಡಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
‘ನಾಡ ಅಧಿದೇವತೆಯ ತವರೂರಿನಲ್ಲಿ, ಸಡಗರದ ದಸರಾ ಹಬ್ಬ..‘ ಈ ಹಾಡನ್ನು ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ರವರ ಮಾರ್ಗದರ್ಶನದಲ್ಲಿ, ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಾದ ಪಿ. ಶಿವರಾಜು ರವರ ರಚನೆ ಮತ್ತು ಪರಿಕಲ್ಪನೆಯಲ್ಲಿ ಮೂಡಿದ್ದು, ಗೀತೆಯ ಸಂಯೋಜನೆಯನ್ನು ನೀತು ನಿನಾದ್ ಮಾಡಿದ್ದಾರೆ. ಇದಲ್ಲದೆ ಜಿಲ್ಲೆಯ ಹೆಸರಾಂತ ಸಾಮಾಜಿಕ ಕಳಕಳಿವುಳ್ಳ “ಆಸ್ಕ್ ಮೈಸೂರು” ಡಿಜಿಟಲ್ ಮಾಧ್ಯಮದ ಸಂಸ್ಥಾಪಕರು ಹಾಗೂ ಕಾಯಕಯೋಗಿ ಪ್ರಾದೇಶಿಕ ದಿನಪತ್ರಿಕೆಯ ಮೈಸೂರು ನಗರ ವರದಿಗಾರರಾದ “ಪ್ರಶಾಂತ್. ಪಿ” ದೃಶ್ಯ ಸಂಸ್ಕರಣೆ ನಿರ್ವಹಣೆ ಮಾಡುವ ಮೂಲಕ ಗಣ್ಯರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ .
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ. ಡಾ.ಎಚ್.ಸಿ ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಚಾಮರಾಜನಗರ ಸಂಸದ ಸುನೀಲ್ ಬೋಸ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ದಸರಾ ಸಮಿತಿ ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Beta feature
Beta feature