ಸರ್ಕಾರದ ಯೋಜನೆಗಳು ಬುಡಕಟ್ಟು ಜನರಿಗೆ ನೇರವಾಗಿ ತಲುಪಬೇಕು : ಪ್ರೊ. ಡಿ. ಆನಂದ್
ಮೈಸೂರು, ಮಾ.೦3:- ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಜನರ ಅಭಿವೃದ್ಧಿಗೆ ಮಾಡುವ ಯೋಜನೆಗಳು ನೇರವಾಗಿ ಫಲಾನುಭವಿಗೆ ತಲುಪುವಂತೆ ಮಾಡಿದಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಾಧ್ಯಾಪಕರಾದ ಪ್ರೊ. ಡಿ. ಆನಂದ್ ತಿಳಿಸಿದರು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ರಾಜ್ಯ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಕರ್ನಾಟಕದ ನೆರೆಯ ರಾಜ್ಯಗಳಲ್ಲಿ ಬುಡಕಟ್ಟು ಜನರ ಕಲ್ಯಾಣ ಕಾರ್ಯಕ್ರಮಗಳ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇರಳ, ಆಂದ್ರ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡುಗಳಲ್ಲಿ ಬುಡಕಟ್ಟು ಜನರಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿವೆ. ರಾಜ್ಯ ಸರ್ಕಾರ SEP, TSP ಯೋಜನೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ ಎಲ್ಲಾ ರಾಜ್ಯಗಳು ಒಟ್ಟಿಗೆ ಸೇರಿ ಯೋಜನೆಗಳನ್ನು ರೂಪಿಸಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿಯೂ ಬುಡಕಟ್ಟು ಜನರ...







