Latest News

ತಂಬಾಕು ರೈತರ ಹಿತ ಕಾಯಬೇಕು: ಕನಿಷ್ಠ ಬೆಂಬಲ ಬೆಲೆಯೊಂದಿಗೆ ಖರೀದಿಗೆ ಎಚ್.ಡಿ.ಕುಮಾರಸ್ವಾಮಿ ಸೂಚನೆ

ಮೈಸೂರು: ರಾಜ್ಯದ ತಂಬಾಕು ರೈತರು ಸಂಕಷ್ಟಕ್ಕೆ ಸಿಲುಕದಂತೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿ ತಕ್ಷಣವೇ ತಂಬಾಕು ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್...
Latest News

ಸರ್ಕಾರದ ಯೋಜನೆಗಳು ಬುಡಕಟ್ಟು ಜನರಿಗೆ ನೇರವಾಗಿ ತಲುಪಬೇಕು : ಪ್ರೊ. ಡಿ. ಆನಂದ್

ಮೈಸೂರು, ಮಾ.೦3:- ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಜನರ ಅಭಿವೃದ್ಧಿಗೆ ಮಾಡುವ ಯೋಜನೆಗಳು ನೇರವಾಗಿ ಫಲಾನುಭವಿಗೆ ತಲುಪುವಂತೆ ಮಾಡಿದಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಾಧ್ಯಾಪಕರಾದ ಪ್ರೊ. ಡಿ. ಆನಂದ್ ತಿಳಿಸಿದರು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ರಾಜ್ಯ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಕರ್ನಾಟಕದ ನೆರೆಯ ರಾಜ್ಯಗಳಲ್ಲಿ ಬುಡಕಟ್ಟು ಜನರ ಕಲ್ಯಾಣ ಕಾರ್ಯಕ್ರಮಗಳ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇರಳ, ಆಂದ್ರ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡುಗಳಲ್ಲಿ ಬುಡಕಟ್ಟು ಜನರಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿವೆ. ರಾಜ್ಯ ಸರ್ಕಾರ SEP, TSP  ಯೋಜನೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ ಎಲ್ಲಾ ರಾಜ್ಯಗಳು ಒಟ್ಟಿಗೆ ಸೇರಿ ಯೋಜನೆಗಳನ್ನು ರೂಪಿಸಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿಯೂ ಬುಡಕಟ್ಟು ಜನರ...
Latest News

ಅಧಿಕಾರಿಗಳು ಜನರನ್ನು ಅಲೆಸದೆ ಕೆಲಸ ಮಾಡಿಕೊಡಿ : ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಮಾ.೦3:- ಅಧಿಕಾರಿಗಳು ಜನರನ್ನು ಕಛೇರಿಯಿಂದ ಕಛೇರಿಗೆ ಅಲೆಸದೆ ಕಾಲಮಿತಿಯೊಳಗೆ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣಾ ಕ್ಷೇತ್ರದ ಶಿವಪುರ, ಹಾರೋಹಳ್ಳಿ, ಲಕ್ಷ್ಮೀಪುರ, ಹಳ್ಳಿಕೆರೆಹುಂಡಿ, ಮೆಲ್ಲಹಳ್ಳಿ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕೆಲವು ಸಮಸ್ಯೆಗಳನ್ನು ಅಲ್ಲೇ ಇದ್ದು ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸಲು ಸೂಚಿಸಿ ಮಾತನಾಡಿದ ಅವರು ವರುಣಾ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿ ಅಭಿವೃದ್ಧಿ ಪಡಿಸಿದ್ದರೂ ಸಹ ಇನ್ನೂ ಸಮಸ್ಯೆಗಳು ಇವೆ. ಶಾಲಾ ಕಟ್ಟಡ ಕೇಳಿದ್ದೀರಿ, ಸ್ಮಶಾನಕ್ಕೆ ಜಾಗ, ರಸ್ತೆ, ವಿದ್ಯುತ್ ಕಂಬಗಳು, ಖಾತೆ ಮಾಡಿಸಿಕೊಡಿ ಎಂದು ಕೇಳಿದ್ದೀರಿ. ನಿಮ್ಮ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಿಕೊಡುತ್ತೇವೆ. ನಮ್ಮ ಸರ್ಕಾರ ೫ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣ ಶಿಕ್ಷಣಕ್ಕೆ ಹೆಚ್ಚು ಒತ್ತನ್ನು ನೀಡಿರುವುದರಿಂದ ಗ್ರಾಮೀಣ ಭಾಗದಲ್ಲಿ ಜನರ ನೆಮ್ಮದಿಯಾಗಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ....
Latest News

₹17 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ – ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಾದಕವಸ್ತುಗಳ ವಿರುದ್ಧ ನಗರ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಒಟ್ಟು ಸುಮಾರು ₹17 ಕೋಟಿ ಮೌಲ್ಯದ ವಿವಿಧ ಮಾದಕವಸ್ತುಗಳನ್ನು ಜಪ್ತಿ ಮಾಡಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ನಗರದಲ್ಲಿ ಸಂಘಟಿತ ಜಾಲದ ಮೂಲಕ ದುಬಾರಿ ಬೆಲೆಯ ಮಾದಕವಸ್ತುಗಳನ್ನು ತರಿಸಿ ಪಾರ್ಟಿಗಳು ಹಾಗೂ ಇತರ ಕಡೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿಗಳಿಂದ ಸಾವಿರಾರು ಎಲ್‌ಎಸ್‌ಡಿ ಸ್ಟ್ರಿಪ್ಸ್‌, ಹೈಡ್ರೋಗಾಂಜಾ, ಚರಸ್ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊದಲ ಪ್ರಕರಣದಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅಶ್ವಿನ್ (27) ಹಾಗೂ ಮೊಬಿನಾ (25) ಎಂಬ ಇಬ್ಬರನ್ನು ಬಂಧಿಸಲಾಗಿದೆ. ಸಿಸಿಬಿ...
Latest News

ನೇಗಿಲಯೋಗಿ ಮಹಿಳಾ ಬಳಗದಿಂದ ಬೆಂಕಿರಹಿತ ಅಡುಗೆ ಸ್ಪರ್ಧೆ – 40ಕ್ಕೂ ಹೆಚ್ಚು ತಿನಿಸುಗಳ ಪ್ರದರ್ಶನ

ಬೆಂಕಿರಹಿತ ಅಡುಗೆ ಸ್ಪರ್ಧೆ ಮೂಲಕ ಮಹಿಳಾ ದಿನಾಚರಣೆಗೆ ಪೂರ್ವಭಾವಿ ಚಾಲನೆ ಮೈಸೂರು :- ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ನೇಗಿಲಯೋಗಿ ಮಹಿಳೆಯರ ಹಿತೈಷಿಗಳ ಸೇವಾ ಬಳಗದ...
Latest News

ಬೇಸಿಗೆ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ: ಡಾ: ಹೆಚ್.ಸಿ.ಮಹದೇವಪ್ಪ

ಮೈಸೂರು,ಮಾ.2:-ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಅವರು...
Latest News

ಶ್ರೀ ಮಹರ್ಷಿ ವಾಲ್ಮೀಕಿ ಯೋಗ ರತ್ನ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ – 2026

ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಮೊದಲ ಬಾರಿಗೆ ಆಯೋಜನೆ. ಮೈಸೂರು, ಮಾ. 03— ಮೈಸೂರಿನ ಸುವರ್ಣ ಬೆಳಕು ಫೌಂಡೇಷನ್ (ರಿ) ವತಿಯಿಂದ 2026ನೇ ಸಾಲಿನಲ್ಲಿ ಮೊದಲ ಬಾರಿಗೆ “ಶ್ರೀ ಮಹರ್ಷಿ ವಾಲ್ಮೀಕಿ ಯೋಗ ರತ್ನ” ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಯೋಗಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಮೇ ತಿಂಗಳ ಮೊದಲ ವಾರದಲ್ಲಿ ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಪೂರ್ವ ನೋಂದಣಿ ಮಾಡಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಸ್ಪರ್ಧೆಯಲ್ಲಿ “ಚಾಂಪಿಯನ್ ಆಫ್ ಚಾಂಪಿಯನ್” ಪಟ್ಟ ಗೆದ್ದ ವಿಜೇತರಿಗೆ ಆಕರ್ಷಕ ಅಪ್ಪಟ ಬೆಳ್ಳಿ ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ವಿವಿಧ ವಿಶೇಷ ವಿಭಾಗಗಳ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಜೊತೆಗೆ, ಭಾಗವಹಿಸಿದ ಎಲ್ಲಾ...
Latest News

ಭೂಮಂಡಲದ ದಿಗಂತದಲ್ಲಿ ಬಾಂಬು, ಬಂದೂಕುಗಳ ಆಟ…..

ವಿಶ್ವದ ಈ ಭೂಮಿಯ ಎಲ್ಲಾ ಜೀವರಾಶಿಗಳು ಮತ್ತು ಸಂಪನ್ಮೂಲಗಳ ಒಡೆಯರು ಕೆಲವೇ ಜನ. ಇದೆಲ್ಲಾ ಅವರದೇ ಆಸ್ತಿ, ಅವರದೇ ಅಧಿಕಾರ, ಅವರದೇ ನಿರ್ಧಾರ. ನಾವೇನಿದ್ದರೂ ಅವರ ಗುಲಾಮರು, ಜೀತದಾಳುಗಳು, ಸಾಯುವ ಆಟದಲ್ಲಿ ನಾವು ಕಾಲಾಳುಗಳು……. ಯುದ್ಧದ ಬಗ್ಗೆ ಪ್ರತಿಕೆಯೊಂದು ನಡೆಸಿದ ಸಂದರ್ಶನದ ಆಯ್ದ ಭಾಗಗಳು……. ಯುದ್ಧವು ವಿಶ್ವದ ಜನಜೀವನದ ಮೇಲೆ, ಒಟ್ಟು ಪರಿಸರದ ಮೇಲೆ ಏನೇನು ಪರಿಣಾಮಗಳನ್ನು ಬೀರಿರಬಹುದು ಎಂಬುದರ ಬಗ್ಗೆ ಕೆಲವು ಪ್ರಶ್ನೆಗಳಿಗೆ  ಅಭಿಪ್ರಾಯ. ಪ್ರಶ್ನೆ1. ಯುದ್ದವು ಸಾಮಾನ್ಯ ಜನಜೀವನದ ಮೇಲೆ ಯಾವ ಪರಿಣಾಮವನ್ನು ಬೀರಿರಬಹುದು ? ಉತ್ತರ….. ಯುದ್ಧದ ಪರಿಣಾಮ ತುಂಬಾ ಭೀಕರವಾಗಿರುತ್ತದೆ. ಸಾವು, ನೋವು, ಗಾಯ, ಅಂಗವೈಕಲ್ಯ, ವಲಸೆ ಹೆಚ್ಚಾಗುತ್ತದೆ. ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಊಹಿಸಲು ಮನಸ್ಸು ಒಪ್ಪದಷ್ಟು ಹಾಳಾಗಿರುತ್ತದೆ. ಸ್ವಲ್ಪ ದೀರ್ಘಕಾಲ ಯುದ್ಧ ನಡೆದರೆ ಸದಾ ಸಾವಿನ ನೆರಳಿನಲ್ಲಿಯೇ ನರಳುವ ಅಲ್ಲಿನ ಸಾಕಷ್ಟು ಜನರ ಮಾನಸಿಕ ಆರೋಗ್ಯ ಖಿನ್ನತೆಯೆಡೆಗೆ...
Latest News

ವಸತಿ ಶಾಲೆ ಮಾಲೀಕನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಕೃತ್ಯ ಮುಚ್ಚಿಡಲು ಪತ್ನಿಯಿಂದ ಬೆದರಿಕೆ – ದಂಪತಿ ಬಂಧನ

ಬೆಂಗಳೂರು ಗ್ರಾಮಾಂತರ, : ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪೋಷಕರು ಹೆಚ್ಚಿನ ವೆಚ್ಚ ಮಾಡಿ ವಸತಿ ಶಾಲೆಗಳಿಗೆ ಕಳುಹಿಸುವ ಸಂದರ್ಭಗಳಲ್ಲಿ, ಮಕ್ಕಳಿಗೆ ರಕ್ಷಣೆ ನೀಡಬೇಕಾದ ಶಾಲೆಯ ಮಾಲೀಕರೇ ದೌರ್ಜನ್ಯ ನಡೆಸಿದ ಅಮಾನುಷ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ವಸತಿ ಶಾಲೆಯ ಮಾಲೀಕ ಧನಂಜಯ್ ಎಂಬಾತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದು, ಈ ಕೃತ್ಯವನ್ನು ಮುಚ್ಚಿಹಾಕಲು ಸಹಕರಿಸಿದ್ದ ಆರೋಪದಲ್ಲಿ ಆತನ ಪತ್ನಿ ಶೈಲಜಾಳನ್ನೂ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮಾಹಿತಿ ಪ್ರಕಾರ, ಶಾಲೆಯಲ್ಲಿ ಓದುತ್ತಿದ್ದ ಕೆಲವು ವಿದ್ಯಾರ್ಥಿನಿಯರ ಮೇಲೆ ಧನಂಜಯ್ ಹಲವು ದಿನಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಡೆದ ಘಟನೆ ಬಗ್ಗೆ ಪೋಷಕರಿಗೆ ತಿಳಿಸದಂತೆ ಮಕ್ಕಳನ್ನು ಬೆದರಿಸಲಾಗಿದ್ದು, ಪರೀಕ್ಷೆಯ ನೆಪದಲ್ಲಿ ಸುಮಾರು 15 ದಿನಗಳ ಕಾಲ ಪೋಷಕರನ್ನು ಭೇಟಿ ಮಾಡಲು ಅವಕಾಶ ನೀಡದೇ ವಸತಿ...
1 7 8 9 10 11 49
Page 9 of 49