ರಾಗಿಣಿ, ಸಂಜನಾಗೆ ಎದುರಾಯಿತು ಸಂಕಷ್ಟ: ಎಫ್ಎಸ್ಎಲ್ ಪರೀಕ್ಷೆಯಲ್ಲಿ ಡ್ರಗ್ಸ್ ಸೇವನೆ ದೃಢ
AskMysuru 24/08/2021 Cinema
ಬೆಂಗಳೂರು: ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್ ಸೇವಿಸಿರುವುದು ಎಫ್.ಎಸ್.ಎಲ್. ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ನಟಿಯರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ.
ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು ಎಫ್.ಎಸ್.ಎಲ್. ಪರೀಕ್ಷೆಯಲ್ಲಿ ದೃಢವಾಗಿದೆ.
ಸಂಜನಾ ಗಲ್ರಾನಿ, ರಾಗಿಣಿ ತಲೆ ಅವರ ತಲೆ ಕೂದಲನ್ನು 2020ರ ಅಕ್ಟೋಬರ್ನಲ್ಲಿ ಹೈದರಾಬಾದ್’ನ ಪ್ರಯೋಗಾಲಯಕ್ಕೆ ಎಫ್.ಎಸ್.ಎಲ್. ಪರೀಕ್ಷೆಗೆ ಕಳುಹಿಸಲಾಗಿತ್ತು.
ಪ್ರಯೋಗಾಲಯದ ಪರೀಕ್ಷಾ ಫಲಿತಾಂಶ ಸಿಸಿಬಿ ಪೊಲೀಸರ ಕೈಸೇರಿದೆ. ಪರೀಕ್ಷಾ ವರದಿಯಲ್ಲಿ ನಟಿಯರಿಬ್ಬರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, ಸದ್ಯ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ರಾಗಿಣಿ, ಸಂಜನಾ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.